Featured

ಮಂಡ್ಯದಲ್ಲಿ ನಿಖಿಲ್​ ರಾಜಕೀಯ ಭವಿಷ್ಯ ಕಷ್ಟ : ಕುಮಾರಸ್ವಾಮಿಗೆ ದ್ವಾರಕಾನಾಥ್ ಗುರೂಜಿ – Vishwanews24

ಬೆಂಗಳೂರು,: ಲೋಕಸಭಾ ಚುನಾವಣೆ ಕಾವೇರುತ್ತಿದ್ದು, ಮಂಡ್ಯ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಈಗಾಗಲೇ ಜೆಡಿಎಸ್ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡುವುದಾಗಿ ಘೋಷಿಸಿದೆ. ಮತ್ತೊಂದೆಡೆ ಸುಮಲತಾ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ಮೈತ್ರಿ ಧರ್ಮಕ್ಕೆ ಕಟ್ಟು ಬಿದ್ದು ಕಾಂಗ್ರೆಸ್ ಟಿಕೆಟ್ ಸಿಗುವುದು ಅನುಮಾನವಾಗಿದೆ. ಸ್ವತಂತ್ರವಾಗಿಯಾದರೂ ಚುನಾವಣೆಗೆ ಸ್ಪರ್ಧಿಸುವುದು ಖಚಿತ ಎಂದು ಸುಮಲತಾ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

ಸುಮಲತಾ ಅವರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರ ಬೆಂಬಲವೂ ದೊರೆತಿದೆ. ಇನ್ನು ಸುಮಲತಾ ಅವರಿಗೆ ಅನುಕಂಪವೂ ವ್ಯಕ್ತವಾಗುತ್ತಿದ್ದು, ಇದು ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ. ಮತ್ತೊಂದೆಡೆ ಗುಪ್ತದಳ ಮಂಡ್ಯ ಕ್ಷೇತ್ರದಿಂದ ನಿಖಿಲ್ ಸ್ಪರ್ಧಿಸಿದರೆ ಗೆಲುವು ಕಷ್ಟ ಎಂದು ತಿಳಿಸಿದೆ. ಹೀಗಾಗಿ ಸಿಎಂ ಕುಮಾರಸ್ವಾಮಿ ತಮ್ಮ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ಚಿಂತೆಗೀಡಾಗಿದ್ದಾರೆ. ತಮ್ಮ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ರಾಜಗುರು ದ್ವಾರಕಾನಾಥ್ ಗುರೂಜಿ ಮೊರೆ ಹೋಗಿದ್ದಾರೆ.

ಈ ವೇಳೆ, ದ್ವಾರಕಾನಾಥ್ ಅವರು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ರಾಜಕೀಯ ಭವಿಷ್ಯ ಕಷ್ಟ ಎಂದು ತಿಳಿಸಿದ್ದಾರಂತೆ. ‘ನಿಖಿಲ್ ಚುನಾವಣೆಗೆ ಸ್ಪರ್ಧೆ ಮಾಡಿದ್ದಾಗಿದೆ. ಈಗ ನಾನು ನಿಖಿಲ್ ಗೆ ಆಶೀರ್ವಾದ ಮಾಡಲೇಬೇಕಿದೆ. ಅಂತೆಯೇ ನಾನು ನನ್ನ ಕರ್ತವ್ಯ ಮಾಡಿದ್ದೇನೆ’ ಎಂದು ಹೇಳಿದ್ದಾರಂತೆ. ದ್ವಾರಕಾನಾಥ್ ಗುರೂಜಿ ಅವರ ಮಾತಿನಿಂದ ಸಿಎಂ ಮತ್ತಷ್ಟು ತಲೆಕೆಡಿಸಿಕೊಂಡಿದ್ದಾರಂತೆ.

ಜೆಡಿಎಸ್ ನಾಯಕರಾದ ಎಚ್.ಡಿ.ರೇವಣ್ಣ ಹಾಗೂ ಕೆ.ಟಿ.ಶ್ರೀಕಂಠೇಗೌಡ ಸುಮಲತಾ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಈಗಾಗಲೇ ಸುಮಲತಾ ಅವರಿಗೆ ಕ್ಷೇತ್ರದಾದ್ಯಂತ ಬೆಂಬಲ ವ್ಯಕ್ತವಾಗಿದೆ. ಮತ್ತೊಂದೆಡೆ ತಮ್ಮನ್ನು ಉದ್ದೇಶಿಸಿ ಹಗುರವಾಗಿ ಮಾತನಾಡಿದವರ ಬಗ್ಗೆಯೂ ಸುಮಲತಾ ಎಚ್ಚರಿಕೆಯಿಂದಲೇ ಪ್ರತಿಕ್ರಿಯಿಸಿದ್ದಾರೆ. ಇದು ಕೂಡ ಸುಮಲತಾ ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ ಎನ್ನಲಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಕೆಲವು ಜೆಡಿಎಸ್ ಕಾರ್ಯಕರ್ತರಿಂದಲೇ ನಿಖಿಲ್ ಸ್ಪರ್ಧೆಗೆ ವಿರೋಧ ಕೇಳಿಬಂದಿದೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲೂ ಗೋ ಬ್ಯಾಕ್ ನಿಖಿಲ್ ಎಂಬುದಾಗಿ ವ್ಯಕ್ತವಾಗಿದೆ. ಕಾಂಗ್ರೆಸ್ ನವರು ಸುಮಲತಾ ಪರವಾಗಿ ಬೆಂಬಲ ನೀಡಲು ಮುಂದಾಗಿದ್ದು, ಕುಮಾರಸ್ವಾಮಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಹೀಗಾಗಿಯೇ ತಮ್ಮ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ತಿಳಿಯಲು ಸಚಿವ ಡಿ.ಕೆ.ಶಿವಕುಮಾರ್​ ಅವರ ಆಪ್ತರಾಗಿರುವ ರಾಜಗುರು ದ್ವಾರಕಾನಾಥ್​ಅವರ ಮನೆಗೆ ತೆರಳಿ ಆಶೀರ್ವಾದ ಪಡೆದಿದ್ದಾರೆ….

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago