ಬೆಂಗಳೂರು,: ಲೋಕಸಭಾ ಚುನಾವಣೆ ಕಾವೇರುತ್ತಿದ್ದು, ಮಂಡ್ಯ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಈಗಾಗಲೇ ಜೆಡಿಎಸ್ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡುವುದಾಗಿ ಘೋಷಿಸಿದೆ. ಮತ್ತೊಂದೆಡೆ ಸುಮಲತಾ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ಮೈತ್ರಿ ಧರ್ಮಕ್ಕೆ ಕಟ್ಟು ಬಿದ್ದು ಕಾಂಗ್ರೆಸ್ ಟಿಕೆಟ್ ಸಿಗುವುದು ಅನುಮಾನವಾಗಿದೆ. ಸ್ವತಂತ್ರವಾಗಿಯಾದರೂ ಚುನಾವಣೆಗೆ ಸ್ಪರ್ಧಿಸುವುದು ಖಚಿತ ಎಂದು ಸುಮಲತಾ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ಸುಮಲತಾ ಅವರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರ ಬೆಂಬಲವೂ ದೊರೆತಿದೆ. ಇನ್ನು ಸುಮಲತಾ ಅವರಿಗೆ ಅನುಕಂಪವೂ ವ್ಯಕ್ತವಾಗುತ್ತಿದ್ದು, ಇದು ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ. ಮತ್ತೊಂದೆಡೆ ಗುಪ್ತದಳ ಮಂಡ್ಯ ಕ್ಷೇತ್ರದಿಂದ ನಿಖಿಲ್ ಸ್ಪರ್ಧಿಸಿದರೆ ಗೆಲುವು ಕಷ್ಟ ಎಂದು ತಿಳಿಸಿದೆ. ಹೀಗಾಗಿ ಸಿಎಂ ಕುಮಾರಸ್ವಾಮಿ ತಮ್ಮ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ಚಿಂತೆಗೀಡಾಗಿದ್ದಾರೆ. ತಮ್ಮ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ರಾಜಗುರು ದ್ವಾರಕಾನಾಥ್ ಗುರೂಜಿ ಮೊರೆ ಹೋಗಿದ್ದಾರೆ.
ಈ ವೇಳೆ, ದ್ವಾರಕಾನಾಥ್ ಅವರು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ರಾಜಕೀಯ ಭವಿಷ್ಯ ಕಷ್ಟ ಎಂದು ತಿಳಿಸಿದ್ದಾರಂತೆ. ‘ನಿಖಿಲ್ ಚುನಾವಣೆಗೆ ಸ್ಪರ್ಧೆ ಮಾಡಿದ್ದಾಗಿದೆ. ಈಗ ನಾನು ನಿಖಿಲ್ ಗೆ ಆಶೀರ್ವಾದ ಮಾಡಲೇಬೇಕಿದೆ. ಅಂತೆಯೇ ನಾನು ನನ್ನ ಕರ್ತವ್ಯ ಮಾಡಿದ್ದೇನೆ’ ಎಂದು ಹೇಳಿದ್ದಾರಂತೆ. ದ್ವಾರಕಾನಾಥ್ ಗುರೂಜಿ ಅವರ ಮಾತಿನಿಂದ ಸಿಎಂ ಮತ್ತಷ್ಟು ತಲೆಕೆಡಿಸಿಕೊಂಡಿದ್ದಾರಂತೆ.
ಜೆಡಿಎಸ್ ನಾಯಕರಾದ ಎಚ್.ಡಿ.ರೇವಣ್ಣ ಹಾಗೂ ಕೆ.ಟಿ.ಶ್ರೀಕಂಠೇಗೌಡ ಸುಮಲತಾ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಈಗಾಗಲೇ ಸುಮಲತಾ ಅವರಿಗೆ ಕ್ಷೇತ್ರದಾದ್ಯಂತ ಬೆಂಬಲ ವ್ಯಕ್ತವಾಗಿದೆ. ಮತ್ತೊಂದೆಡೆ ತಮ್ಮನ್ನು ಉದ್ದೇಶಿಸಿ ಹಗುರವಾಗಿ ಮಾತನಾಡಿದವರ ಬಗ್ಗೆಯೂ ಸುಮಲತಾ ಎಚ್ಚರಿಕೆಯಿಂದಲೇ ಪ್ರತಿಕ್ರಿಯಿಸಿದ್ದಾರೆ. ಇದು ಕೂಡ ಸುಮಲತಾ ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ ಎನ್ನಲಾಗಿದೆ.
ಮಂಡ್ಯ ಕ್ಷೇತ್ರದಲ್ಲಿ ಕೆಲವು ಜೆಡಿಎಸ್ ಕಾರ್ಯಕರ್ತರಿಂದಲೇ ನಿಖಿಲ್ ಸ್ಪರ್ಧೆಗೆ ವಿರೋಧ ಕೇಳಿಬಂದಿದೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲೂ ಗೋ ಬ್ಯಾಕ್ ನಿಖಿಲ್ ಎಂಬುದಾಗಿ ವ್ಯಕ್ತವಾಗಿದೆ. ಕಾಂಗ್ರೆಸ್ ನವರು ಸುಮಲತಾ ಪರವಾಗಿ ಬೆಂಬಲ ನೀಡಲು ಮುಂದಾಗಿದ್ದು, ಕುಮಾರಸ್ವಾಮಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಹೀಗಾಗಿಯೇ ತಮ್ಮ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ತಿಳಿಯಲು ಸಚಿವ ಡಿ.ಕೆ.ಶಿವಕುಮಾರ್ ಅವರ ಆಪ್ತರಾಗಿರುವ ರಾಜಗುರು ದ್ವಾರಕಾನಾಥ್ಅವರ ಮನೆಗೆ ತೆರಳಿ ಆಶೀರ್ವಾದ ಪಡೆದಿದ್ದಾರೆ….
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…