ಮಂಡ್ಯ: ಪುತ್ರ ನಿಖಿಲ್ ಅವರನ್ನು ಗೆಲ್ಲಿಸಿಕೊಳ್ಳಲು ಪ್ರತಿಷ್ಠೆಯನ್ನು ಪಣಕ್ಕೊಡ್ಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಚುನಾವಣೆ ಮುಗಿಯುವವರೆಗೂ ನಗರದಲ್ಲೇ ಠಿಕಾಣಿ ಹೂಡಲು ಮುಂದಾಗಿದ್ದಾರೆ. ಬುಧವಾರ ಆದಿಚುಂಚನಗಿರಿ ಮಠದಲ್ಲಿ ಪೂಜೆ ಸಲ್ಲಿಸುವ ಮೂಲಕ ಅಬ್ಬರದ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ನಗರದಲ್ಲಿ ಜೆಡಿಎಸ್ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಕ್ಷೇತ್ರ ಪ್ರವಾಸದಲ್ಲಿರುವ ಪುತ್ರ ನಿಖಿಲ್ ಅವರೊಂದಿಗೆ ಪ್ರಚಾರದಲ್ಲಿ ತೊಡಗಲಿದ್ದಾರೆ. ಪತ್ನಿ, ರಾಮನಗರ ಶಾಸಕಿ ಅನಿತಾ ಕೂಡ ಸಾಥ್ ನೀಡಲಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುವವರೆಗೂ ಕ್ಷೇತ್ರದಲ್ಲೇ ಉಳಿದು ಪ್ರಚಾರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್ 25ರಂದು ಪಂಚಮಿಯ ಶುಭ ಗಳಿಗೆಯಲ್ಲಿ ನಿಖಿಲ್ ನಾಮಪತ್ರ ಸಲ್ಲಿಸಲಿದ್ದಾರೆ.
ಮದ್ದೂರು ಪಟ್ಟಣದ ಹೊಳೆ ಆಂಜನೇಯ ದೇವಾಲಯದಲ್ಲಿ ಶಾಸಕಿ ಅನಿತಾ ನಡೆಸುತ್ತಿರುವ ‘ಒಂದೂಕಾಲು ರೂಪಾಯಿ ಹರಕೆ’ ಸೇವೆಗೆ ನಾಲ್ಕು ವಾರ ಪೂರೈಸಿದರು. ಮಂಗಳವಾರ ದೇವಾಲಯಕ್ಕೆ ಭೇಟಿ ನೀಡಿ, ಪುತ್ರನ ಹೆಸರಿನಲ್ಲಿ ಪೂಜೆ ಸಲ್ಲಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…