ಬೆಂಗಳೂರು: ತಮ್ಮ ಕ್ಲಿನಿಕ್ ಗೆ ಬರುವ ರೋಗಿಗಳಿಗೆ ಕೇವಲ ಐದು ರೂಪಾಯಿ ಶುಲ್ಕ ಪಡೆದು ಚಿಕಿತ್ಸೆ ನೀಡುತ್ತಿರುವ ಮಂಡ್ಯದ ಪ್ರಸಿದ್ದ ವೈದ್ಯ ಶಂಕರೇಗೌಡ ಅವರಿಗೆ ಸಿಎನ್‌ಎನ್ ನ್ಯೂಸ್18 ಸಂಸ್ಥೆ ವತಿಯಿಂದ ನೀಡಲಾಗುವ ಈ ಬಾರಿಯ ‘ಇಂಡಿಯನ್ ಆಫ್ ದಿ ಇಯರ್-2022’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸಾಮಾಜಿಕ ಬದಲಾವಣೆ ವಿಭಾಗದಲ್ಲಿ ಡಾ.ಶಂಕರೇಗೌಡರಿಗೆ ‘ಇಂಡಿಯನ್ ಆಫ್ ದಿ ಇಯರ್-2022’ ಪ್ರಶಸ್ತಿ ನೀಡಲಾಗಿದೆ. ಹೊಸದಿಲ್ಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಜನತಾದಳ (ಜಾತ್ಯತೀತ) ಪಕ್ಷದ “ಜಿಲ್ಲಾ ವಕ್ತಾರರಾಗಿ ಶ್ರೀ ಶ್ರೀಕಾಂತ್ ಹೆಬ್ರಿ ನೇಮಕ- Vishwanews24
‘ನಾನು 1982ರಿಂದ ಅಭ್ಯಾಸ ಮಾಡುತ್ತಿದ್ದೇನೆ. ಅಂದಿನಿಂದ ಇಂದಿನವರೆಗೆ ಐದು ರೂಪಾಯಿ ಶುಲ್ಕ ಹಾಕುತ್ತೇನೆ. ನಮ್ಮಲ್ಲಿ ಯಾವ ಜ್ಞಾನವಿದೆಯೋ ಅದನ್ನು ಎಲ್ಲರಿಗೂ ಸಮಾನವಾಗಿ ನೀಡಬೇಕು. ಹಾಗಾಗಿ ನನ್ನ ಜ್ಞಾನವನ್ನು ನನ್ನ ಶಿಕ್ಷಣಕ್ಕೆ ಕಾರಣರಾದ ನನ್ನ ಜನರಿಗೆ ನೀಡಬೇಕು ಎನ್ನುವ ಉದ್ದೇಶದಿಂದ ಪದವಿ ಪಡೆದ ನಂತರ ನನ್ನ ಊರಿನಲ್ಲಿ ಅಭ್ಯಾಸ ಮಾಡಲು ಪ್ರಾರಂಭಿಸಿದೆ ಎಂದು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವೈದ್ಯ ಡಾ.ಶಂಕರೇಗೌಡ ಹೇಳಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 5 ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿಗಳಿಸಿರುವ ಮಂಡ್ಯದ ವೈದ್ಯ ಶ್ರೀ ಶಂಕರೇಗೌಡರಿಗೆ ಇಂಡಿಯನ್ ಆಫ್ ದಿ ಇಯರ್-2022′ ಪ್ರಶಸ್ತಿ ಲಭಿಸಿರುವುದು ಅತ್ಯಂತ ಅಭಿನಂದನಾರ್ಹ ಸಂಗತಿಯಾಗಿದೆ. ಗ್ರಾಮೀಣ ಭಾಗದ ಜನರ ಸೇವೆಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಹಿಜಾಬ್ ವಿವಾದ ಸುಪ್ರೀಂ ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ..: ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…