Featured

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ

ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57) ಅವರು ಇಂದು ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ  ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:

ಕಳೆದ ಮೂರು ವರ್ಷಗಳಿಂದ ಮಂಡ್ಯ ಜಿಲ್ಲೆಯಲ್ಲಿ ಅಪರ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ತಿಮ್ಮಯ್ಯ ಅವರು ಕರ್ತವ್ಯನಿಷ್ಠ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದರು. ಜಿಲ್ಲೆಯಲ್ಲಿ ನಡೆದ ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆ, ಗಣಪತಿ ವಿಸರ್ಜನಾ ಗಲಾಟೆ, ಕೆರಗೋಡು ಧ್ವಜ ವಿವಾದ ಹಾಗೂ ಸಾರ್ವತ್ರಿಕ ಚುನಾವಣೆಗಳಂತಹ ಅತ್ಯಂತ ಸೂಕ್ಷ್ಮ ಸನ್ನಿವೇಶಗಳಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ: 

ಮೃತ ಅಧಿಕಾರಿಯ ಪಾರ್ಥಿವ ಶರೀರವನ್ನು ಮಂಡ್ಯದಲ್ಲಿ ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿಯ ಅಂತಿಮ ದರ್ಶನಕ್ಕೆ ಇರಿಸಲು ವ್ಯವಸ್ಥೆ ಮಾಡಲಾಗಿದೆ. ನಂತರ ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಹಾಗೂ ಪೊಲೀಸ್ ಇಲಾಖೆ ತಿಳಿಸಿದೆ .

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

10 minutes ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

49 minutes ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

57 minutes ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 hour ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

21 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

22 hours ago