Featured

ಮಂಡ್ಯ ಅರ್ಚಕರ ಹತ್ಯೆ ಪ್ರಕರಣ : ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ : ಸಿಎಂ ಬಿಎಸ್ ವೈ ಘೋಷಣೆ -Vishwanews24

ಮಂಡ್ಯ ಅರ್ಚಕರ ಹತ್ಯೆ ಪ್ರಕರಣ : ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ : ಸಿಎಂ ಬಿಎಸ್ ವೈ ಘೋಷಣೆ -Vishwanews24

ಬೆಂಗಳೂರು : ಮಂಡ್ಯದ ಅರಕೇಶ್ವರ ದೇವಾಲಯದ ಮೂವರು ಅರ್ಚಕರನ್ನು ಬರ್ಬರವಾಗಿ ಹತ್ಯೆಗೈಯಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಹತ್ಯೆಯಾದ ಮೂವರು ಅರ್ಚಕರ ಕುಟುಂಬಕ್ಕೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರು ತಲಾ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ಮಂಡ್ಯದ ಅರಕೇಶ್ವರ ದೇವಸ್ಥಾನದ ಪೂಜಾರಿಗಳಾಗಿದ್ದ ಶ್ರೀ ಗಣೇಶ್, ಶ್ರೀ ಪ್ರಕಾಶ್ ಮತ್ತು ಶ್ರೀ ಆನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿರುವ ವಿಷಯ ತಿಳಿದು ಅತ್ಯಂತ ನೋವಾಗಿದೆ” ಎಂದು ಸಂತಾಪ ಸೂಚಿಸಿದ್ದಾರೆ.

ಹಾಗೆಯೇ, ”ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಮುಜರಾಯಿ ಇಲಾಖೆಗೆ ಸೇರಿರುವ ಮಂಡ್ಯದ ಅರಕೇಶ್ವರ ದೇವಾಲಯದ ಮೂವರು ಅರ್ಚಕರಾದ ಗಣೇಶ್ (35), ಪ್ರಕಾಶ್ (36), ಆನಂದ್ (33) ಎಂಬವರು ದೇವಾಲಯದ ಪೂಜೆಯೊಂದಿಗೆ ದೇವಾಲಯದ ಕಾವಲು ಕೂಡಾ ಕಾಯುತ್ತಿದ್ದರು. ಗುರುವಾರ ರಾತ್ರಿ ಅರ್ಚಕರನ್ನು ಹತ್ಯೆ ಮಾಡಿ ಹುಂಡಿಯ ಹಣವನ್ನು ದೋಚಿರುವ ಕಳ್ಳರು, ಹುಂಡಿಯಲ್ಲಿನ ನೋಟುಗಳನ್ನು ಮಾತ್ರ ತೆಗೆದುಕೊಂಡು ಚಿಲ್ಲರೆ ಇರುವ ಹುಂಡಿಯನ್ನು ಆವರಣದಲ್ಲಿ ಎಸೆದು ಹೋಗಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 hour ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 hour ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

2 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

24 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago