Featured

ಮಂಡ್ಯ:  ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಚಾಲೆಜಿಂಗ್ ಸ್ಟಾರ್ ದರ್ಶನ್ ಪ್ರಚಾರ  – Vishwanews24

ಮಂಡ್ಯ:  ಕಾಂಗ್ರೆಸ್ ಅಭ್ಯರ್ಥಿ ಪರ ಚಾಲೆಜಿಂಗ್ ಸ್ಟಾರ್ ದರ್ಶನ್ ಪ್ರಚಾರ

ಬೆಂಗಳೂರು : ಇತ್ತೀಚೆಗೆ ಬಿಜೆಪಿ ಸೇರಿರುವ ಸಂಸದೆ ಸುಮಲತಾರನ್ನು ‘ಅಮ್ಮಾ’ ಎಂದೇ ಕರೆಯುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು  ಪರ ಪ್ರಚಾರಕ್ಕೆ ಮುಂದಾಗಿದ್ದು ಕುತೂಹಲ ಸೃಷ್ಟಿಸಿದೆ. ಈ ಮಧ್ಯೆ, ಮೈತ್ರಿ ಅಭ್ಯರ್ಥಿ ಜೆಡಿಎಸ್ ಪಕ್ಷದ ಹೆಚ್​ಡಿ ಕುಮಾರಸ್ವಾಮಿ ಪರ ಸುಮಲತಾ ಇನ್ನೂ ಪ್ರಚಾರದ ಅಖಾಡಕ್ಕಿಲ್ಲ. ಬಿಜೆಪಿಯ ರಾಜ್ಯ, ಕೇಂದ್ರ ನಾಯಕರು ಹೇಳಿದರೆ ಕುಮಾರಸ್ವಾಮಿ ಪರ ಪ್ರಚಾರ ಮಾಡುವುದಾಗಿ ಸುಮಲತಾ ಹೇಳಿದ್ದರು. ಆದರೆ ಈವರೆಗೆ ಪ್ರಚಾರ ಮಾಡದೆ ಮೌನವಾಗಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರಕ್ಕೆ ಮುಂದಾಗಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಳ್ಳಲು ಕೊನೆಯ ವರೆಗೂ ಶ್ರಮಿಸಿದ್ದ ಸುಮಲತಾ ಕೊನೆಗೂ ಕಣದಿಂದ ಹಿಂದೆ ಸರಿದಿದ್ದರು. ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಬಿಜೆಪಿ ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಜತೆ ಭಾಗವಹಿಸಿ ಮತಯಾಚನೆ ಮಾಡಿದ್ದರು. ಆದರೆ, ಇದೀಗ ಸುಮಲತಾರ ಮಾನಸ ಪುತ್ರ ದರ್ಶನ್ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಬೇಟೆಗೆ ಸಜ್ಜಾಗಿದ್ದಾರೆ.

ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ಯಶ್ ಜತೆ ಜೋಡೆತ್ತಿನಂತೆ ನಿಂತಿದ್ದ ದರ್ಶನ್ ಸುಮಲತಾ ಪರ ಬೆವರು ಸುರಿಸಿ ಮಂಡ್ಯದಲ್ಲಿ ಪ್ರಚಾರ ಮಾಡಿದ್ದರು. ಆದರೆ, ಈಗ ಸುಮಲತಾ ಬಿಜೆಪಿಯಲ್ಲಿದ್ದರೂ ದರ್ಶನ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋಗುತ್ತಿರುವುದು ಸಾಕಷ್ಟು ಅಚ್ಚರಿ ಮತ್ತು ಚರ್ಚೆಗೆ ಗ್ರಾಸವಾಗಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

18 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago