ಬೆಂಗಳೂರು : ಇತ್ತೀಚೆಗೆ ಬಿಜೆಪಿ ಸೇರಿರುವ ಸಂಸದೆ ಸುಮಲತಾರನ್ನು ‘ಅಮ್ಮಾ’ ಎಂದೇ ಕರೆಯುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಮುಂದಾಗಿದ್ದು ಕುತೂಹಲ ಸೃಷ್ಟಿಸಿದೆ. ಈ ಮಧ್ಯೆ, ಮೈತ್ರಿ ಅಭ್ಯರ್ಥಿ ಜೆಡಿಎಸ್ ಪಕ್ಷದ ಹೆಚ್ಡಿ ಕುಮಾರಸ್ವಾಮಿ ಪರ ಸುಮಲತಾ ಇನ್ನೂ ಪ್ರಚಾರದ ಅಖಾಡಕ್ಕಿಲ್ಲ. ಬಿಜೆಪಿಯ ರಾಜ್ಯ, ಕೇಂದ್ರ ನಾಯಕರು ಹೇಳಿದರೆ ಕುಮಾರಸ್ವಾಮಿ ಪರ ಪ್ರಚಾರ ಮಾಡುವುದಾಗಿ ಸುಮಲತಾ ಹೇಳಿದ್ದರು. ಆದರೆ ಈವರೆಗೆ ಪ್ರಚಾರ ಮಾಡದೆ ಮೌನವಾಗಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರಕ್ಕೆ ಮುಂದಾಗಿದ್ದಾರೆ.
ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಳ್ಳಲು ಕೊನೆಯ ವರೆಗೂ ಶ್ರಮಿಸಿದ್ದ ಸುಮಲತಾ ಕೊನೆಗೂ ಕಣದಿಂದ ಹಿಂದೆ ಸರಿದಿದ್ದರು. ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಬಿಜೆಪಿ ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಜತೆ ಭಾಗವಹಿಸಿ ಮತಯಾಚನೆ ಮಾಡಿದ್ದರು. ಆದರೆ, ಇದೀಗ ಸುಮಲತಾರ ಮಾನಸ ಪುತ್ರ ದರ್ಶನ್ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಬೇಟೆಗೆ ಸಜ್ಜಾಗಿದ್ದಾರೆ.
ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಕಳೆದ ಚುನಾವಣೆಯಲ್ಲಿ ಯಶ್ ಜತೆ ಜೋಡೆತ್ತಿನಂತೆ ನಿಂತಿದ್ದ ದರ್ಶನ್ ಸುಮಲತಾ ಪರ ಬೆವರು ಸುರಿಸಿ ಮಂಡ್ಯದಲ್ಲಿ ಪ್ರಚಾರ ಮಾಡಿದ್ದರು. ಆದರೆ, ಈಗ ಸುಮಲತಾ ಬಿಜೆಪಿಯಲ್ಲಿದ್ದರೂ ದರ್ಶನ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋಗುತ್ತಿರುವುದು ಸಾಕಷ್ಟು ಅಚ್ಚರಿ ಮತ್ತು ಚರ್ಚೆಗೆ ಗ್ರಾಸವಾಗಿದೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…