ಮಂಡ್ಯ: ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮಂಡ್ಯ ಲೋಕಸಭಾ ಕ್ಷೇತ್ರದ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರನ್ನು ಕರ್ನಾಟಕ ಸರ್ಕಾರ ಮಂಗಳವಾರ ವರ್ಗಾಯಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಒತ್ತಡಕ್ಕೆ ಮಣಿದು ಮೈತ್ರಿ ಅಭ್ಯರ್ಥಿ ಕೆ.ನಿಖಿಲ್ ಪರ ಏಕಪಕ್ಷೀಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಹಲವು ದೂರು ದಾಖಲಾಗಿದ್ದವು. ನಿಖಿಲ್ ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಕಡೆ ಏಜೆಂಟರು ಆಕ್ಷೇಪಣೆ ಸಲ್ಲಿಸಿದ್ದರೂ ಅದನ್ನು ಪರಿಗಣಿಸದೇ ನಾಮಪತ್ರ ಅಂಗೀಕರಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
ನೀತಿ–ನಿಯಮಗಳನ್ನು ಗಾಳಿಗೆ ತೂರಿ ನಿಖಿಲ್ ಗೆಲುವಿಗಾಗಿ ಜಿಲ್ಲಾ ಚುನಾವಣಾಧಿಕಾರಿ ಕೆಲಸ ಮಾಡುತ್ತಿದ್ದಾರೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಲು ಅವರು ಸ್ಥಾನ ತೊರೆಯಬೇಕು ಎಂದು ಸುಮಲತಾ ಒತ್ತಾಯಿಸಿದ್ದರು. ಈ ಕುರಿತು ಚುನಾವಣಾ ಆಯೋಗಕ್ಕೆ ಸರಣಿ ದೂರುಗಳು ದಾಖಲಾಗಿದ್ದವು. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪರಿಶೀಲನೆ ನಡೆಸಿದ್ದರು.
ಸ್ಥಳೀಯರು ಎಂಬ ಕಾರಣಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಕೆ.ಯಾಲಕ್ಕಿಗೌಡ ಅವರನ್ನು ಸರ್ಕಾರ ಈಚೆಗೆ ವರ್ಗಾವಣೆ ಮಾಡಿತ್ತು. ಎನ್.ಮಂಜುಶ್ರೀ 2017ರ ಆ.9ರಿಂದ ಮಂಡ್ಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…