ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಖಾಸಗಿ ಬಸ್ ವಿಸಿ ನಾಲೆಗೆ ಉರುಳಿದ ಪರಿಣಾಮ ಮೂವರು ಮಕ್ಕಳು ಸೇರಿ 20ಕ್ಕೂ ಜನರು ಸಾವನ್ನಪ್ಪಿದ್ದಾರೆ.
ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ನಾಲೆಗೆ ಉರುಳಿದೆ. ಖಾಸಗಿ ಬಸ್ ಪ್ರತಿನಿತ್ಯ ಎರಡು ಬಾರಿ ಸಂಚರಿಸುತ್ತಿತ್ತು. ಬಸ್ ಚಾಲಕನ ನಿರ್ಲಕ್ಷ್ಯದಿಂದ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ನಾಲೆಗೆ ಉರುಳಿದೆ.
ನಾಲೆ ಆಳವಾಗಿದ್ದು, ತಡೆ ಗೋಡೆ ಇರಲಿಲ್ಲ. ಬಸ್ ಸಂಪೂರ್ಣವಾಗಿ ಮುಳುಗಿದೆ. ಬಸ್‌ನಲ್ಲಿ 50 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…