ಮಂಡ್ಯ: ಸುಮಲತಾ ಅಂಬರೀಷ್ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಮಂಡ್ಯ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಸುಮಲತಾ ಅವರು ತಮ್ಮ ಉಮೇದುವಾರಿಕೆಗೆ ಸಂಬಂಧಿಸಿದ ನಾಮಪತ್ರವನ್ನು ಸಲ್ಲಿಸಿದರು. ಸುಮಲತಾ ಅವರು ಮೂರು ಸೆಟ್ ಗಳಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಎಲ್ಲಾ ಸಮುದಾಯದ ಮುಖಂಡರನ್ನು ಜೊತೆಯಾಗಿಸಿಕೊಂಡು ಹಾಗೂ ಅಸಂಖ್ಯಾತ ಅಂಬರೀಷ್ ಅಭಿಮಾನಿಗಳ ಹರ್ಷೋದ್ಘಾರದ ನಡುವೆ ಸುಮಲತಾ ಅವರು ಜಿಲ್ಲಾಧಿಕಾರಿ ಕಛೇರಿಯನ್ನು ತಲುಪಿದರು. ಸುಮಲತಾ ಅವರ ನಮಪತ್ರಕ್ಕೆ ‘ಅಹಿಂದ’ ನಾಯಕರು ಅನುಮೋದನೆ ನೀಡಿದ್ದು ವಿಶೇಷವಾಗಿತ್ತು. ದಲಿತ, ಕುರುಬ, ಗಂಗಾಮತಸ್ಥ ಮತ್ತು ಮುಸ್ಲಿಂ ಸಮುದಾಯದ ಪ್ರತಿನಿಧಿತ್ವದಲ್ಲಿ ‘ಅಹಿಂದ’ ಕಾಂಬಿನೇಷನ್ ಗೆ ಮೊರೆ ಹೋಗುವ ಮೂಲಕ ಸುಮಲತಾ ಅವರು ಈ ಮೂಲಕ ಸಿದ್ಧರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸುಮಲತಾ ಅವರು ತಮ್ಮ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಛೇರಿಯಿಂದ ಸಿಲ್ವರ್ ಜ್ಯುಬಿಲಿ ಪಾರ್ಕ್ ನತ್ತ ಬೃಹತ್ ಜಾಥಾ ನಡೆಸಲಿದ್ದಾರೆ. ಜಾಥಾದಲ್ಲಿ ಪುತ್ರ ಅಭಿಷೇಕ್ ಅಂಬರೀಷ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ಪ್ರಮುಖ ಆಕರ್ಷಣೆಯಾಗಲಿದ್ದಾರೆ. ಇನ್ನುಳಿದಂತೆ ರಾಕ್ ಲೈನ್ ವೆಂಕಟೇಶ್, ನಟ ದೊಡ್ಡಣ್ಣ ಸೇರಿದಂತೆ ಘಟಾನುಘಟಿಗಳೂ ಸಹ ಈ ಜಾಥಾದಲ್ಲಿ ಭಾಗವಹಿಸುತ್ತಿದ್ದಾರೆ.
ಸುಮಲತಾ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರ ಬೆಂಬಲ
ಮಂಡ್ಯದಲ್ಲಿ ಕೈ-ತೆನೆ ಮೈತ್ರಿ ಅಭ್ಯರ್ಥಿಯಾಗಿ ನಿಖೀಲ್ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿದ್ದರೂ ಮಂಡ್ಯದ ಕೆಲ ಕಾಂಗ್ರೆಸ್ ಕಾರ್ಯಕರ್ತರು ಸುಮಲತಾ ಅವರಿಗೆ ಬಹಿರಂಗ ಬೆಂಬಲವನ್ನು ಸೂಚಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ವೇಳೆ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಧ್ವಜವನ್ನು ಹಿಡಿದು ಸುಮಲತಾ ಅವರಿಗೆ ಬಹಿರಂಗ ಬೆಂಬಲವನ್ನು ಸೂಚಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…