Featured

ಮಂಡ್ಯ ಲೋಕಸಭಾ ಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ನಾಮಪತ್ರ ಸಲ್ಲಿಕೆ -Vishwanews24

ಮಂಡ್ಯ: ಸುಮಲತಾ ಅಂಬರೀಷ್‌ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಮಂಡ್ಯ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಸುಮಲತಾ ಅವರು ತಮ್ಮ ಉಮೇದುವಾರಿಕೆಗೆ ಸಂಬಂಧಿಸಿದ ನಾಮಪತ್ರವನ್ನು ಸಲ್ಲಿಸಿದರು. ಸುಮಲತಾ ಅವರು ಮೂರು ಸೆಟ್‌ ಗಳಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಎಲ್ಲಾ ಸಮುದಾಯದ ಮುಖಂಡರನ್ನು ಜೊತೆಯಾಗಿಸಿಕೊಂಡು ಹಾಗೂ ಅಸಂಖ್ಯಾತ ಅಂಬರೀಷ್‌ ಅಭಿಮಾನಿಗಳ ಹರ್ಷೋದ್ಘಾರದ ನಡುವೆ ಸುಮಲತಾ ಅವರು ಜಿಲ್ಲಾಧಿಕಾರಿ ಕಛೇರಿಯನ್ನು ತಲುಪಿದರು. ಸುಮಲತಾ ಅವರ ನಮಪತ್ರಕ್ಕೆ ‘ಅಹಿಂದ’ ನಾಯಕರು ಅನುಮೋದನೆ ನೀಡಿದ್ದು ವಿಶೇಷವಾಗಿತ್ತು. ದಲಿತ, ಕುರುಬ, ಗಂಗಾಮತಸ್ಥ ಮತ್ತು ಮುಸ್ಲಿಂ ಸಮುದಾಯದ ಪ್ರತಿನಿಧಿತ್ವದಲ್ಲಿ ‘ಅಹಿಂದ’ ಕಾಂಬಿನೇಷನ್‌ ಗೆ ಮೊರೆ ಹೋಗುವ ಮೂಲಕ ಸುಮಲತಾ ಅವರು ಈ ಮೂಲಕ ಸಿದ್ಧರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸುಮಲತಾ ಅವರು ತಮ್ಮ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಛೇರಿಯಿಂದ ಸಿಲ್ವರ್‌ ಜ್ಯುಬಿಲಿ ಪಾರ್ಕ್‌ ನತ್ತ ಬೃಹತ್‌ ಜಾಥಾ ನಡೆಸಲಿದ್ದಾರೆ. ಜಾಥಾದಲ್ಲಿ ಪುತ್ರ ಅಭಿಷೇಕ್‌ ಅಂಬರೀಷ್‌ ಮತ್ತು ರಾಕಿಂಗ್‌ ಸ್ಟಾರ್‌ ಯಶ್‌ ಅವರು ಪ್ರಮುಖ ಆಕರ್ಷಣೆಯಾಗಲಿದ್ದಾರೆ. ಇನ್ನುಳಿದಂತೆ ರಾಕ್‌ ಲೈನ್‌ ವೆಂಕಟೇಶ್‌, ನಟ ದೊಡ್ಡಣ್ಣ ಸೇರಿದಂತೆ ಘಟಾನುಘಟಿಗಳೂ ಸಹ ಈ ಜಾಥಾದಲ್ಲಿ ಭಾಗವಹಿಸುತ್ತಿದ್ದಾರೆ.

ಸುಮಲತಾ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರ ಬೆಂಬಲ
ಮಂಡ್ಯದಲ್ಲಿ ಕೈ-ತೆನೆ ಮೈತ್ರಿ ಅಭ್ಯರ್ಥಿಯಾಗಿ ನಿಖೀಲ್‌ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿದ್ದರೂ ಮಂಡ್ಯದ ಕೆಲ ಕಾಂಗ್ರೆಸ್‌ ಕಾರ್ಯಕರ್ತರು ಸುಮಲತಾ ಅವರಿಗೆ ಬಹಿರಂಗ ಬೆಂಬಲವನ್ನು ಸೂಚಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ವೇಳೆ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷದ ಧ್ವಜವನ್ನು ಹಿಡಿದು ಸುಮಲತಾ ಅವರಿಗೆ ಬಹಿರಂಗ ಬೆಂಬಲವನ್ನು ಸೂಚಿಸಿದ್ದಾರೆ.

 

Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

31 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

42 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

47 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

54 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

19 hours ago