Featured

ಮಂಡ್ಯ ಲೋಕಸಭಾ ಚುನಾವಣೆ : ಸುಮಲತಾ ವಿರುದ್ಧ ಅದೇ ಹೆಸರಿನ ಮೂವರಿಂದ ನಾಮಪತ್ರ ಸಲ್ಲಿಕೆ…Vishwanews24

ಮಂಡ್ಯ :ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಮತದಾರರಲ್ಲಿ ಗೊಂದಲ ಮೂಡಿಸಲು ಸುಮಲತಾ ಹೆಸರಿನ ಮೂವರನ್ನು ಕಣಕ್ಕಿಳಿಸಲಾಗಿದೆ. ಇದರೊಂದಿಗೆ ಸುಮಲತಾ ಹೆಸರಿನ ನಾಲ್ವರು ಮಂಡ್ಯ ಲೋಕಸಭಾ ಕಣದಲ್ಲಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ರಂಗನಾಥ ಬಡಾವಣೆಯ ಬಿ ಸುಮಲತಾ,  ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಟಿಎಂ ಹೊಸೂರು ಗ್ರಾಮದ ಸುಮಲತಾ ಹಾಗೂ ಕೆಆರ್ ಪೇಟೆ ತಾಲ್ಲೂಕು ಗೊರವಿ ಗ್ರಾಮದ ಎಂ. ಸುಮಲತಾ ನಾಮಪತ್ರ ಸಲ್ಲಿಸಿದ್ದಾರೆ. ಮಾತ್ರವಲ್ಲ, ಸುಮಲತಾ ಅಂಬರೀಶ್ ಕೇಳಿರುವ ಚಿಹ್ನೆಯನ್ನು ಸುಮಲತಾ ಹೆಸರಿನ ಈ ಮೂವರು ಚುನಾವಣಾ ಆಯೋಗಕ್ಕೆ ಕೇಳಿದ್ದಾರೆ ಎನ್ನಲಾಗಿದೆ.

ಸುಮಲತಾ ಅಂಬರೀಷ್ ಅವರು ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ತೀವ್ರ ಪ್ರಚಾರ ನಡೆಸುತ್ತಿದ್ದಾರೆ. ಹೀಗಾಗಿ ಅವರಿಗೆ ಪೈಪೋಟಿ ನೀಡಲು ಹೊಸ ತಂತ್ರ ರೂಪಿಸಲಾಗಿದೆ. ಸುಮಲತಾ ಅವರದೇ ಹೆಸರಿನ ಇನ್ನೂ ಮೂವರು ಮಹಿಳೆಯರು ಮಂಡ್ಯ ಲೋಕಸಭೆಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸುಮಲತಾ ಹೆಸರಿನ ನಾಲ್ಕು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ ಅಂಬರೀಶ್, ಸೋಲಿನ ಭಯದಿಂದ ನೇರ ಫೈಟ್ ಮಾಡದೆ ಇಂತಹ ಹಿಂಬಾಗಿಲ ರಾಜಕಾರಣ ಮಾಡಲಾಗುತ್ತಿದೆ. 1 ತಿಂಗಳ ಹಿಂದೆಯೇ ಇದನ್ನು ಕೆಲವರು ನನಗೆ ಹೇಳಿದ್ದರು. ಒಂದೇ ಹೆಸರಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೊಂದಲ ಮೂಡಿಸಲಾಗುತ್ತದೆ ಎಂದು ತಿಳಿಸಿದ್ದರು. ನನಗೆ ಇಂತಹ ರಾಜಕಾರಣ ಬೇಕಿಲ್ಲ. ಅವರೇ ಅವರ ಭಯವನ್ನು ತೋರಿಸಿಕೊಳ್ಳುತ್ತಿದ್ದಾರೆ. ಸುಮಲತಾ ಹೆಸರಿನ ಎಷ್ಟು ಜನರಾದರೂ ನಿಲ್ಲಲಿ. ಅಭ್ಯರ್ಥಿಗಳ ಫೋಟೋ ಇರುತ್ತದೆ. ಜನರಿಗೆ ಅದು ಗೊತ್ತಾಗುತ್ತದೆ. ಇಂತಹ ಕೆಲಸದಿಂದ ಯಾರಿಗೆ ಲಾಭವಾಗುತ್ತದೆ ಎಂಬುದು ಜನರಿಗೆ ತಿಳಿದಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago