ಮಂಡ್ಯ: ಇಲ್ಲಿನ ಕೆರಗೋಡು ಹನುಮಧ್ವಜ ತೆರವು ಪ್ರಕರಣ ಅಯೋಧ್ಯೆಯ ಅಂಗಳದಲ್ಲಿ ಸದ್ದು ಮಾಡಿದೆ. ಹಿಂದೂ ಕಾರ್ಯಕರ್ತರು ಅಯೋಧ್ಯೆಯ ಬಾಲರಾಮನ ದರ್ಶನ ಪಡೆದು, ಮತ್ತೆ ಹನುಮಧ್ವಜ ಹಾರಿಸುತ್ತೇವೆ ಎಂದು ದೇವಾಲಯದ ಆವರಣದಲ್ಲಿ ಘೋಷಣೆ ಕೂಗಿದ್ದಾರೆ.
ಹನುಮಧ್ವಜ ವಿವಾದದ ಬಳಿಕ ಕೆರಗೋಡು ಗ್ರಾಮಸ್ಥರು ಹಾಗೂ ಹಿಂದೂ ಕಾರ್ಯಕರ್ತರು ಅಯೋಧ್ಯೆ ಪ್ರವಾಸಕ್ಕೆ ತೆರಳಿದ್ದಾರೆ. ಈ ವೇಳೆ ಶ್ರೀರಾಮನ ದರ್ಶನ ಪಡೆದ ಗ್ರಾಮಸ್ಥರು ಶ್ರೀರಾಮನ ಸನ್ನಿಧಿಯಲ್ಲಿ ನಿಂತು ಹನುಮಧ್ವಜ ಹಾರಿಸುವ ಘೋಷಣೆ ಕೂಗಿದ್ದಾರೆ. ಈ ಮೂಲಕ ಕೆರಗೋಡಿನಲ್ಲಿ ಮತ್ತೆ ಹನುಮಧ್ವಜ ಹಾರಿಸಲು ಗ್ರಾಮಸ್ಥರು ಪಣ ತೊಟ್ಟಿದ್ದಾರೆ.
ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು 108 ಅಡಿ ಎತ್ತರದಲ್ಲಿ ಹನುಮಧ್ವಜ ಹಾರಿಸಿದ್ದಕ್ಕೆ ಆ ಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದರು. ಹನುಮಧ್ವಜ ಇಳಿಸಿದ್ದಕ್ಕೆ ಗ್ರಾಮದಲ್ಲಿ ಪ್ರತಿಭಟನೆ ಸಹ ನಡೆದಿತ್ತು. ಹನುಮಧ್ವಜ ಹಾರಿಸಲು ಅವಕಾಶ ನೀಡಬೇಕು ಎಂದು ಗ್ರಾಮಸ್ಥರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು.
ಇದೇ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಹಿಂದೂ ಸಂಘಟನೆಗಳು ಮಂಡ್ಯ ಬಂದ್ ಸಹ ಮಾಡಿ ಜಿಲ್ಲಾಡಳಿತಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಇದೀಗ ಮತ್ತೆ ಕೆರಗೋಡು ಗ್ರಾಮಸ್ಥರು ರಾಮನ ಸನ್ನಿಧಿಯಲ್ಲಿ ನಿಂತು ಕೆರಗೋಡಲ್ಲಿ ಹನುಮ ಧ್ವಜ ಹಾರಿಸುವ ಪಣ ತೊಟ್ಟಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…