ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ.
ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. 12 ಮಂದಿ ಗಾಯಾಳುಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಇಬ್ಬರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಿಹಾರ ಮೂಲಕ 20 ವರ್ಷದ ಸುಹಾಸ್ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಕಂಟೇನರ್ ವಾಹನದಲ್ಲಿ ತನ್ನ ಸ್ನೇಹಿತರೊಂದಿಗೆ ಬಿಹಾರಕ್ಕೆ ಸುಹಾಸ್ ತೆರಳುತ್ತಿದ್ದ ಎನ್ನಲಾಗಿದೆ. ಇನ್ನು ಹೊಸ ಬೈಕುಗಳನ್ನ ಹೊತ್ತು ಹೈದರಾಬಾದ್ ಕಡೆಗೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಸುಗಮ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ ಡಿಕ್ಕಿ ಹೊಡೆದಿದೆ. ಘಟನೆ ನಂತರ ಸ್ಥಳಕ್ಕೆ ಎಸ್‌ಪಿ ಕುಶಾಲ್ ಚೌಕ್ಸಿ ಸೇರಿದಂತೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದರು.
ಅಪಘಾತದಲ್ಲಿ ಬಸ್ ಗುದ್ದಿದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸು ಕಂಟೈನರ್‌ನ ಒಳಗೆ ಸಿಲುಕಿಕೊಂಡಿದ್ದು, ಓರ್ವ ಪ್ರಯಾಣಿಕನ ಕಾಲು ಸಹ ಸಿಲುಕಿ ನರಳಾಡಿರೋದು ಕಂಡುಬಂದಿದೆ. ಗಂಟೆಗಟ್ಟಲೆ ಹರಸಹಾಸ ಪಟ್ಟು ಕೊನೆಗೆ ಕಟಿಂಗ್ ಮಿಷನ್ ಮೂಲಕ ರಾಡುಗಳನ್ನ ಕಟ್ ಮಾಡಿ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…