Featured

ಮಂತ್ರಾಲಯಕ್ಕೆ ಭೇಟಿ ನಟಿ ರಾಯರ ದರ್ಶನ ಪಡೆದ ನಟಿ ರಚಿತಾ ರಾಮ್ – Vishwanews24

ಮಂತ್ರಾಲಯಕ್ಕೆ ಭೇಟಿ ನಟಿ ರಾಯರ ದರ್ಶನ ಪಡೆದ ನಟಿ ರಚಿತಾ ರಾಮ್

ಕಳೆದ ವಾರವಷ್ಟೇ ಮೇಲುಕೋಟೆ ದೇವಸ್ಥಾನಕ್ಕೆ ಭೇಟಿ ನೀಡಿದ್ದ ನಟಿ ರಚಿತಾ ರಾಮ್ ಇಂದು ಮುಂಜಾನೆ ಮಂತ್ರಾಲಯಕ್ಕೂಭೇಟಿ ನೀಡಿ ಗುರುರಾಯರ ದರ್ಶನ ಪಡೆದಿದ್ದಾರೆ. ರಾಯರ ಗುರುವೈಭವೋತ್ಸವ ಹಿನ್ನೆಲೆಯಲ್ಲಿ ಅವರು ಮಂತ್ರಾಲಯಕ್ಕೆ ಬಂದಿದ್ದು, ರಾಯರ ಮೂಲವೃಂದಾವನ ದರ್ಶನ ಪಡೆದರು. ನಂತರ ಮಂಚಾಲಮ್ಮ‌ ದೇವಿಗೆ ವಿಶೇಷ ಪೂಜೆ‌‌ ಸಲ್ಲಿಸಿದ್ದಾರೆ.

ಬೆಳಿಗ್ಗೆ 5 ಗಂಟೆಗೆ ರಚಿತಾ ರಾಮ್ ಹೆಜ್ಜೆ ನಮಸ್ಕಾರ ಹಾಕಿದ್ದಾರೆ. ಸಾಮಾನ್ಯವಾಗಿ ಹರಕೆ ಹೊತ್ತವರು ಮಠದ ಪ್ರಾಂಗಣದಲ್ಲಿ ಹೆಜ್ಜೆ ನಮಸ್ಕಾರ ಹಾಕುವುದು ವಾಡಿಕೆ. ಹಾಗಾಗಿ ರಚಿತಾ ಕೂಡ ಹರಕೆ ಹೊತ್ತಿದ್ದರು ಎಂದು ಹೇಳಲಾಗುತ್ತಿದೆ. ನಟಿ ಚೂಡಿದಾರ್ ನಲ್ಲಿ ಬಂದ ಹಿನ್ನೆಲೆಯಲ್ಲಿ ಅವರಿಗೆ ವಿಶೇಷ ದರ್ಶನಕ್ಕೆ ಅವಕಾಶ ನೀಡಿದೆ ಮಠದ ಸಿಬ್ಬಂದಿ.

ಗುರುವೈಭವೋತ್ಸವ ಹಿನ್ನೆಲೆ ಸಂಜೆ ರಚಿತಾ ರಾಮ್ ಗೆ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸನ್ಮಾನ ಕಾರ್ಯಕ್ರಮವಿದೆ. ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್  ಹಾಗೂ ರಚಿತಾ ರಾಮ್‌ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳಿಂದ ಸಂಜೆ ನಡೆಯು ಕಾರ್ಯಕ್ರಮದಲ್ಲಿ ಗುರುವೈಭವೋತ್ಸವ ಪ್ರಶಸ್ತಿ ಪಡೆಯಲಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago