ಕಳೆದ ವಾರವಷ್ಟೇ ಮೇಲುಕೋಟೆ ದೇವಸ್ಥಾನಕ್ಕೆ ಭೇಟಿ ನೀಡಿದ್ದ ನಟಿ ರಚಿತಾ ರಾಮ್ ಇಂದು ಮುಂಜಾನೆ ಮಂತ್ರಾಲಯಕ್ಕೂಭೇಟಿ ನೀಡಿ ಗುರುರಾಯರ ದರ್ಶನ ಪಡೆದಿದ್ದಾರೆ. ರಾಯರ ಗುರುವೈಭವೋತ್ಸವ ಹಿನ್ನೆಲೆಯಲ್ಲಿ ಅವರು ಮಂತ್ರಾಲಯಕ್ಕೆ ಬಂದಿದ್ದು, ರಾಯರ ಮೂಲವೃಂದಾವನ ದರ್ಶನ ಪಡೆದರು. ನಂತರ ಮಂಚಾಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೆಳಿಗ್ಗೆ 5 ಗಂಟೆಗೆ ರಚಿತಾ ರಾಮ್ ಹೆಜ್ಜೆ ನಮಸ್ಕಾರ ಹಾಕಿದ್ದಾರೆ. ಸಾಮಾನ್ಯವಾಗಿ ಹರಕೆ ಹೊತ್ತವರು ಮಠದ ಪ್ರಾಂಗಣದಲ್ಲಿ ಹೆಜ್ಜೆ ನಮಸ್ಕಾರ ಹಾಕುವುದು ವಾಡಿಕೆ. ಹಾಗಾಗಿ ರಚಿತಾ ಕೂಡ ಹರಕೆ ಹೊತ್ತಿದ್ದರು ಎಂದು ಹೇಳಲಾಗುತ್ತಿದೆ. ನಟಿ ಚೂಡಿದಾರ್ ನಲ್ಲಿ ಬಂದ ಹಿನ್ನೆಲೆಯಲ್ಲಿ ಅವರಿಗೆ ವಿಶೇಷ ದರ್ಶನಕ್ಕೆ ಅವಕಾಶ ನೀಡಿದೆ ಮಠದ ಸಿಬ್ಬಂದಿ.
ಗುರುವೈಭವೋತ್ಸವ ಹಿನ್ನೆಲೆ ಸಂಜೆ ರಚಿತಾ ರಾಮ್ ಗೆ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸನ್ಮಾನ ಕಾರ್ಯಕ್ರಮವಿದೆ. ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹಾಗೂ ರಚಿತಾ ರಾಮ್ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳಿಂದ ಸಂಜೆ ನಡೆಯು ಕಾರ್ಯಕ್ರಮದಲ್ಲಿ ಗುರುವೈಭವೋತ್ಸವ ಪ್ರಶಸ್ತಿ ಪಡೆಯಲಿದ್ದಾರೆ.
ಬೆಂಗಳೂರು: ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…
ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…