Featured

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ

ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಮಂಗಳವಾರ ನಸುಕಿನ ಜಾವ (ಜು.21) ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ (43) ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

ರವಿ ಶೆಟ್ಟಿ ಅವರು ತಮ್ಮ ಸ್ನೇಹಿತರೊಂದಿಗೆ ಮಂತ್ರಾಲಯ ರಾಘವೇಂದ್ರ ಸ್ವಾಮಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರವಿ ಶೆಟ್ಟಿಯವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಂಗಳೂರಿನ ಪ್ರದೀಪ್‌ ಆಳ್ವ, ಪುರುಷೋತ್ತಮ ಭಂಡಾರಿ, ಸಿಎ ಸುಧೇಶ್‌ ರೈ ಎಂದು ಗುರುತಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಕಾರ, ರವಿಶೆಟ್ಟಿ ತಮ್ಮ ಸ್ನೇಹಿತರೊಂದಿಗೆ ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲು ಮಂತ್ರಾಲಯಕ್ಕೆ ಹೊರಟಿದ್ದರು. ಅವರು ಪ್ರಯಾಣಿಸುತ್ತಿದ್ದ ಕಾರು ಮಂತ್ರಾಲಯದ ಬಳಿ ನಿಯಂತ್ರಣ ತಪ್ಪಿ ಕಲ್ವರ್ಟ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರವಿಶೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದರು. ಕಾರಿನಲ್ಲಿದ್ದ ಇತರ ಮೂವರು ಕುಟುಂಬ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯರು ತಕ್ಷಣ ಸ್ಪಂದಿಸಿ ಗಾಯಾಳುಗಳನ್ನು ಎಮ್ಮಿಗನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲಿ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಅಪಘಾತ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ.

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago