ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಮಾಡುವ ರಾಯರ ಭಕ್ತರು ಇನ್ನುಮುಂದೆ ಸಾಕಷ್ಟು ಎಚ್ವರಿಕೆ ವಹಿಸಬೇಕಿದೆ. ಯಾಕೆಂದರೆ ರೂಂ ಬುಕ್ಕಿಂಗ್, ಪ್ರಸಾದ, ವಿವಿಧ ಸೇವೆಗಳ ಸೌಲಭ್ಯ ಒದಗಿಸುವ ಹೆಸರಲ್ಲಿ ವಂಚಕರ ಜಾಲ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮಂತ್ರಾಲಯ ರಾಯರ ಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಭಕ್ತರು ಜಾಗೃತರಾಗಿರಲು ಸೂಚಿಸಿದೆ.
ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದು, ಭಕ್ತರಿಂದ ಹಣ ಸಂಗ್ರಹ ಮಾಡಲಾಗುತ್ತಿದೆ. ಫೇಕ್ ಯುಪಿಐ ಐಡಿಗಳ ಮೂಲಕ ಹಣ ಹಾಕಿಸಿಕೊಂಡು ವಂಚಿಸಲಾಗುತ್ತಿದೆ. ವಂಚಕರ ಜಾಲದಿಂದ ಭಕ್ತರು ಹಣ ಕಳೆದುಕೊಳ್ಳುತ್ತಿದ್ದಾರೆ.
ವಂಚಕರ ಕರೆ, ಪೋಸ್ಟ್, ಮೆಸೇಜ್ ನಂಬಿ ನಕಲಿ ಯುಪಿಐ ಐಡಿಗಳಿಗೆ ಹಣ ಹಾಕದಂತೆ ಮಠ ಎಚ್ಚರಿಕೆ ನೀಡಿದೆ. ವಂಚಕರಿಂದ ಕರೆ, ಮೆಸೇಜ್ ಬಂದರೆ ಸೈಬರ್ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಿದೆ. ಕೊಠಡಿಗಳನ್ನು ಅಧಿಕೃತ ವೆಬ್‌ಸೈಟ್‌ನಿಂದ ಬುಕ್ ಮಾಡುವಂತೆ ತಿಳಿಸಿದೆ.ಮಠದ ವ್ಯವಸ್ಥಾಪಕ ವೆಂಕಟೇಶ್ ಜೋಶಿ ವಂಚಕರ ಜಾಲದ ಬಗ್ಗೆ ಪ್ರಕಟಣೆ ಹೊರಡಿಸಿ ಭಕ್ತರು ಎಚ್ಚರಿಕೆಯಿಂದಿರಲು ತಿಳಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…