ಉಡುಪಿ: ಸಪ್ತೋತ್ಸವದ ಆರನೇ ದಿನವಾದ ಮಂಗಳವಾರ ರಾತ್ರಿ ಶ್ರೀಕೃಷ್ಣ ಮಠದಲ್ಲಿ ಮಕರ ಸಂಕ್ರಾಂತಿಯ ಅಂಗವಾಗಿ ಆಕರ್ಷಕ ಮೂರು ತೇರು ಉತ್ಸವ ನಡೆಯಿತು.
ದಕ್ಷಿಣಾಯಣದ ಆರು ತಿಂಗಳ ಅವಧಿಯ ಕೊನೆಯ ದಿನವಾದ ಮಕರ ಸಂಕ್ರಮಣದ ದಿನದಂದು ಉಡುಪಿ ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ಮಠದ ಸಂಪ್ರದಾಯದಂತೆ ಮೂರು ರಥವನ್ನು ಎಳೆಯುವ ಉತ್ಸವ ಅನಾದಿ ಕಾಲದಿಂದಲೂ ನಡೆದು ಕೊಂಡು ಬರುತ್ತಿದೆ.
ಮಧ್ವಾಚಾರ್ಯರು ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದ ದಿನವೆಂದು ಹೇಳಲಾದ ಮಕರಸಂಕ್ರಮಣದಂದು ರಾತ್ರಿ ರಥಬೀದಿಯಲ್ಲಿ ಮೂರು ತೇರು ಉತ್ಸವ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯುವುದು ಸಂಪ್ರದಾಯವಾಗಿದೆ. ಚಿನ್ನದ ಪಲ್ಲಕ್ಕಿಯಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣರನ್ನು ತಂದು ರಥಗಳಲ್ಲಿ ಕುಳ್ಳಿರಿಸಲಾಯಿತು. ಚಿಕ್ಕ ರಥದಲ್ಲಿ ಮುಖ್ಯಪ್ರಾಣ, ಮಧ್ಯ ರಥದಲ್ಲಿ ಅನಂತೇಶ್ವರ ಮತ್ತು ಚಂದ್ರ ಮೌಳೀಶ್ವರ ಹಾಗೂ ಬ್ರಹ್ಮರಥದಲ್ಲಿ ಕೃಷ್ಣನನ್ನು ಕುಳ್ಳಿರಿಸಿ ರಥಬೀದಿಗೆ ಒಂದು ಸುತ್ತು ಬರಲಾಯಿತು
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…