ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ನೋಡುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧವಾಗಿದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯುವ ಕಠಿಣ ಕಾನೂನು ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.
ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ನೇತೃತ್ವದ ನ್ಯಾಯಪೀಠವು ತಳ್ಳಿಹಾಕಿದೆ. ತೀರ್ಪು ನೀಡುವಲ್ಲಿ ಮದ್ರಸ್ ಉಚ್ಚ ನ್ಯಾಯಾಲಯವು “ಘೋರ ದೋಷ” ಎಸಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
28 ವರ್ಷದ ಯುವಕನೊಬ್ಬ ತನ್ನ ಫೋನ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿದ ಆರೋಪಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು. ನ್ಯಾಯಾಲಯವು ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿತ್ತು.
ಇತ್ತೀಚಿನ ದಿನಗಳಲ್ಲಿ ಮಕ್ಕಳು ಅಶ್ಲೀಲತೆ ಚಿತ್ರಗಳನ್ನು ಮೊಬೈಲ್, ಕಂಪ್ಯೂಟರ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು ನೋಡುವ ಗಂಭೀರ ಸಮಸ್ಯೆ ಹೊಂದಿದ್ದಾರೆ. ಸಮಾಜವು ಅವರನ್ನು ಶಿಕ್ಷಿಸುವ ಬದಲು ಅವರಿಗೆ ಶಿಕ್ಷಣ ನೀಡುವಷ್ಟು ಪ್ರಬುದ್ಧವಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಇಂದು ಮರುಸ್ಥಾಪಿಸಿದೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…