ಉಡುಪಿ, : ಜಿಲ್ಲೆಯ ಅಲೆವೂರು, ಬೆಳ್ಳೆ ಮತ್ತು ಕುಂತಳನಗರ ಪರಿಸರದಲ್ಲಿ ಮಕ್ಕಳ ಕಳ್ಳರು ತಿರುಗಾಡುತ್ತಿದ್ದಾರೆ ಎಂಬ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಎಚ್ಚರಿಸಿದ್ದಾರೆ.
“ಅಲೆವೂರು, ಬೆಳ್ಳೆ ಮತ್ತು ಕುಂತಳನಗರ ಭಾಗಗಳಲ್ಲಿ ಮಕ್ಕಳ ಕಳ್ಳರು ವೇಷ ಮರೆಸಿಕೊಂಡು ಓಡಾಡುತ್ತಿದ್ದಾರೆ. ಪೋಷಕರು ಬೆಳಿಗ್ಗೆ ಮತ್ತು ಸಂಜೆ ತಮ್ಮ ಮಕ್ಕಳನ್ನು ಆಟೋಗಳಲ್ಲಿ ಕಳುಹಿಸುವಾಗ ಜೊತೆಯಲ್ಲೇ ಇರಬೇಕು. ಮಕ್ಕಳನ್ನು ಜಾಗರೂಕತೆಯಿಂದ ರಕ್ಷಿಸುವುದು ಎಲ್ಲರ ಜವಾಬ್ದಾರಿ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ.
ಇದನ್ನೂ ಓದಿ:👇
“ಈ ಸುದ್ದಿ ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ. ಸಾರ್ವಜನಿಕರು ಇಂತಹ ಯಾವುದೇ ಸಂದೇಶಗಳನ್ನು ಹಂಚಿಕೊಳ್ಳಬಾರದು ಅಥವಾ ಫಾರ್ವರ್ಡ್ ಮಾಡಬಾರದು. ಯಾರಾದರೂ ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದು ಕಂಡುಬಂದಲ್ಲಿ ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಿ. ಅಂತಹವರ ವಿರುದ್ಧ ಅಧಿಕೃತವಾಗಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಈ ಬಗ್ಗೆ ಎಸ್‌ಪಿ ಹರಿರಾಮ್ ಶಂಕರ್ ಸ್ಪಷ್ಟನೆ ನೀಡಿದ್ದಾರೆ.
ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಪೋಷಕರು ಮತ್ತು ಪೊಲೀಸರ ಕರ್ತವ್ಯವಾಗಿದೆ. ಆದರೆ ಇಂತಹ ತಪ್ಪು ಮಾಹಿತಿಗಳನ್ನು ಹರಡುವುದರಿಂದ ಸಾರ್ವಜನಿಕರಲ್ಲಿ ಅನಗತ್ಯ ಆತಂಕ ಮತ್ತು ಗೊಂದಲ ಉಂಟಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇಂತಹ ಸಂದೇಶಗಳನ್ನು ನಂಬಬೇಡಿ ಮತ್ತು ಜಾಗರೂಕರಾಗಿರಿ. ಒಂದು ವೇಳೆ ಅಂತಹ ಮಕ್ಕಳ ಕಳ್ಳರ ಬಗ್ಗೆ ಮಾಹಿತಿ ಇದ್ದಲ್ಲಿ ಅದನ್ನು ಅಧಿಕೃತ ಮಾಧ್ಯಮಗಳ ಮೂಲಕವೇ ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:👇
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…