ನವದೆಹಲಿ: ಮಕ್ಕಳ ಕಳ್ಳಸಾಗಣೆ ಪ್ರಕರಣ ಸಂಬಂಧ ದೆಹಲಿಯ ಹಲವು ಪ್ರದೇಶಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಈ ಪ್ರಕರಣ ಸಂಬಂಧ ಕೆಲವರನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ಬಂಧಿತರಲ್ಲಿ ಆಸ್ಪತ್ರೆಯ ವಾರ್ಡ್ ಬಾಯ್ ಸೇರಿದಂತೆ ಕೆಲವು ಮಹಿಳೆಯರು ಮತ್ತು ಪುರುಷರು ಸೇರಿದ್ದಾರೆ. ಶುಕ್ರವಾರ ಸಂಜೆ ದೆಹಲಿ-ಎನ್‌ಸಿಆರ್‌ನ ಹಲವೆಡೆ ಸಿಬಿಐ ದಾಳಿ ನಡೆಸಿತ್ತು. ದಾಳಿ ವೇಳೆ ಸಿಬಿಐ ತಂಡ ಕೇಶವಪುರಂನ ಮನೆಯೊಂದರಿಂದ 2 ನವಜಾತ ಶಿಶುಗಳನ್ನು ಮತ್ತು 8 ಮಕ್ಕಳನ್ನು ರಕ್ಷಿಸಿದೆ.
ಸದ್ಯ ಸಿಬಿಐ ತಂಡ ಈ ಪ್ರಕರಣದಲ್ಲಿ ಮಕ್ಕಳನ್ನು ಮಾರಾಟ ಮಾಡಿದ ಮಹಿಳೆ ಹಾಗೂ ಖರೀದಿಸಿದ ವ್ಯಕ್ತಿಯ ವಿಚಾರಣೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಕೆಲವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಯುತ್ತಿದೆ.
ನಾಲ್ಕೈದು ಲಕ್ಷಕ್ಕೆ ಮಕ್ಕಳ ಮಾರಾಟ: ಸಿಬಿಐ (CBI) ಮೂಲಗಳ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಸುಮಾರು 10 ಮಕ್ಕಳನ್ನು ಮಾರಾಟ ಮಾಡಲಾಗಿದೆ. ಈ ಗ್ಯಾಂಗ್ ನ ನಂಟುಗಳು ಹಲವು ರಾಜ್ಯಗಳಲ್ಲಿ ಹರಡಿಕೊಂಡಿವೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಮಾಹಿತಿ ಪ್ರಕಾರ ನವಜಾತ ಶಿಶುಗಳನ್ನು 4 ರಿಂದ 5 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ.
ದೆಹಲಿಯ ಕೆಲವು ದೊಡ್ಡ ಆಸ್ಪತ್ರೆಗಳಿಂದ ಮಕ್ಕಳು ಕಾಣೆಯಾಗಿದ್ದಾರೆ ಎಂಬ ವರದಿಗಳು ಬಂದಿವೆ. ನಂತರ ಸಿಬಿಐ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿ ಮಹಿಳೆ ಸೇರಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಮಕ್ಕಳ ವ್ಯಾಪಾರದ ಬಗ್ಗೆ ಮಾಹಿತಿ ಪಡೆದ ಸಿಬಿಐ, ನಾಪತ್ತೆಯಾದ ಮಕ್ಕಳೊಂದಿಗೆ ಸಂಪರ್ಕ ಸಾಧಿಸಿ ದಾಳಿ ನಡೆಸಿತು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…