Featured

ಮಕ್ಕಳ ಕಳ್ಳಸಾಗಣೆ  : ನಾಲ್ಕೈದು ಲಕ್ಷಕ್ಕೆ ಮಕ್ಕಳ ಮಾರಾಟ – ಸಿಬಿಐ ದಾಳಿ ; ನವಜಾತ ಶಿಶುಗಳ ರಕ್ಷಣೆ – Vishwanews24

ಮಕ್ಕಳ ಕಳ್ಳಸಾಗಣೆ  : ನಾಲ್ಕೈದು ಲಕ್ಷಕ್ಕೆ ಮಕ್ಕಳ ಮಾರಾಟ – ಸಿಬಿಐ ದಾಳಿ ಮಾಡಿ ನವಜಾತ ಶಿಶುಗಳ ರಕ್ಷಣೆ

ನವದೆಹಲಿ: ಮಕ್ಕಳ ಕಳ್ಳಸಾಗಣೆ  ಪ್ರಕರಣ ಸಂಬಂಧ ದೆಹಲಿಯ ಹಲವು ಪ್ರದೇಶಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಈ ಪ್ರಕರಣ ಸಂಬಂಧ ಕೆಲವರನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಬಂಧಿತರಲ್ಲಿ ಆಸ್ಪತ್ರೆಯ ವಾರ್ಡ್ ಬಾಯ್ ಸೇರಿದಂತೆ ಕೆಲವು ಮಹಿಳೆಯರು ಮತ್ತು ಪುರುಷರು ಸೇರಿದ್ದಾರೆ. ಶುಕ್ರವಾರ ಸಂಜೆ ದೆಹಲಿ-ಎನ್‌ಸಿಆರ್‌ನ ಹಲವೆಡೆ ಸಿಬಿಐ ದಾಳಿ ನಡೆಸಿತ್ತು. ದಾಳಿ ವೇಳೆ ಸಿಬಿಐ ತಂಡ ಕೇಶವಪುರಂನ ಮನೆಯೊಂದರಿಂದ 2 ನವಜಾತ ಶಿಶುಗಳನ್ನು ಮತ್ತು 8 ಮಕ್ಕಳನ್ನು ರಕ್ಷಿಸಿದೆ.

ಸದ್ಯ ಸಿಬಿಐ ತಂಡ ಈ ಪ್ರಕರಣದಲ್ಲಿ ಮಕ್ಕಳನ್ನು ಮಾರಾಟ ಮಾಡಿದ ಮಹಿಳೆ ಹಾಗೂ ಖರೀದಿಸಿದ ವ್ಯಕ್ತಿಯ ವಿಚಾರಣೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಕೆಲವರನ್ನು ಸಿಬಿಐ ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಯುತ್ತಿದೆ.

ನಾಲ್ಕೈದು ಲಕ್ಷಕ್ಕೆ ಮಕ್ಕಳ ಮಾರಾಟ: ಸಿಬಿಐ (CBI) ಮೂಲಗಳ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಸುಮಾರು 10 ಮಕ್ಕಳನ್ನು ಮಾರಾಟ ಮಾಡಲಾಗಿದೆ. ಈ ಗ್ಯಾಂಗ್ ನ ನಂಟುಗಳು ಹಲವು ರಾಜ್ಯಗಳಲ್ಲಿ ಹರಡಿಕೊಂಡಿವೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಮಾಹಿತಿ ಪ್ರಕಾರ ನವಜಾತ ಶಿಶುಗಳನ್ನು 4 ರಿಂದ 5 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ.

ದೆಹಲಿಯ ಕೆಲವು ದೊಡ್ಡ ಆಸ್ಪತ್ರೆಗಳಿಂದ ಮಕ್ಕಳು ಕಾಣೆಯಾಗಿದ್ದಾರೆ ಎಂಬ ವರದಿಗಳು ಬಂದಿವೆ. ನಂತರ ಸಿಬಿಐ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿ ಮಹಿಳೆ ಸೇರಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಮಕ್ಕಳ ವ್ಯಾಪಾರದ ಬಗ್ಗೆ ಮಾಹಿತಿ ಪಡೆದ ಸಿಬಿಐ, ನಾಪತ್ತೆಯಾದ ಮಕ್ಕಳೊಂದಿಗೆ ಸಂಪರ್ಕ ಸಾಧಿಸಿ ದಾಳಿ ನಡೆಸಿತು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago