Featured

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಮರಣದಂಡನೆ ಶಿಕ್ಷೆ ; ಲೋಕಸಭೆಯಲ್ಲಿ ಮಸೂದೆ ಅಂಗೀಕಾರ -Vishwanews24

ನವದೆಹಲಿ: ಮಕ್ಕಳ ಮೇಲಿನ ಹೀನ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಕಾನೂನನ್ನು ಒಳಗೊಂಡಿರುವ ‘ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೋ)’ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.
ಇದು ಅಪ್ರಾಪ್ತರ ವಿರುದ್ಧದ ಇತರ ಅಪರಾಧಗಳಿಗೂ ಕಠಿಣ ಶಿಕ್ಷೆ ನೀಡುವ ಅಂಶಗಳನ್ನು ಒಳಗೊಂಡಿದೆ. ಮಸೂದೆ ಮಂಡಿಸಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ, ಈ ಕರಡು ಪ್ರತಿಯಿಂದ ದೇಶದ 47 ಕೋಟಿ ಜನರು ರಕ್ಷಣೆ ಪಡೆಯಲಿದ್ದಾರೆ. ಕರಡು ಮಸೂದೆಯನ್ನು ಈಗಾಗಲೇ ರಾಜ್ಯಸಭೆ ಅಂಗೀಕರಿಸಿದೆ. ಈ ತಿದ್ದುಪಡಿ ಭಾರತೀಯ ದಂಡ ಸಂಹಿತೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸಲಿದೆ ಎಂದರು.
ಪೋಕ್ಸೋ ಕಾಯ್ದೆ ಲಿಂಗಭೇದವಿಲ್ಲದೆ ಅಪ್ರಾಪ್ತ ಮಕ್ಕಳ ಮೇಲಿನ ಅಪರಾಧಗಳಿಗೆ ಶಿಕ್ಷ ಒದಗಿಸುತ್ತದೆ. ಇದು ಮಕ್ಕಳ ಅಶ್ಲೀಲ ಚಿತ್ರಗಳಿಗೆ ದಂಡ ಹಾಗೂ ಶಿಕ್ಷೆಯನ್ನು ವಿಧಿಸುತ್ತದೆ. ಇಂದಿನ ಸಮಾಜದಲ್ಲಿ ಇಂತಹ ಮಸೂದೆ ಜಾರಿಗೊಳಿಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಅತ್ಯಾಚಾರದಂಥ ಘಟನೆಗಳಲ್ಲಿ ಬಾಲಾಪರಾಧಿ ಭಾಗಿಯಾದರೆ ಅಂಥ ಪ್ರಕರಣಗಳು ಬಾಲಪರಾಧ ನ್ಯಾಯ ಮಂಡಳಿ ವ್ಯಾಪ್ತಿಯಲ್ಲಿ ಬರುತ್ತವೆ. ಇಂಥ ಪ್ರಕರಣಗಳಲ್ಲಿ ಕೃತ್ಯವೆಸಗಿದಾತ 18 ವರ್ಷ ವಯೋಮಿತಿಯವನಾಗಿದ್ದರೆ ಮಾತ್ರ ಗಲ್ಲು ಶಿಕ್ಷೆ ನೀಡಲಾಗುತ್ತದೆ ಎಂದರು ಇರಾನಿ. ನಿರ್ಭಯಾ ನಿಧಿ ನೆರವಿನೊಂದಿಗೆ ದೇಶಾದ್ಯಂತ 1,023 ತ್ವರಿತಗತಿಯ ಕೋರ್ಟ್‌ಗಳನ್ನು ಸ್ಥಾಪಿಸಲಾಗುತ್ತದೆ ಎಂದರು.

ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದವರಿಗೆ ಕಠಿನಾತಿಕಠಿನ ಶಿಕ್ಷೆ ನೀಡಬೇಕು ಎಂಬ ಬಗ್ಗೆ ಒಕ್ಕೊರಲ ಆಗ್ರಹ ವ್ಯಕ್ತವಾಯಿತು. ಆರ್‌ಎಲ್ಪಿಸಂಸದ ಬೇನಿವಾಲ್, ಇಂಥ ಪ್ರಕರಣದಲ್ಲಿ ಭಾಗಿಯಾದವರನ್ನು ಸಾರ್ವಜನಿಕವಾಗಿ ಗಲ್ಲಿ ಗೇರಿಸಬೇಕು ಎಂದು ಒತ್ತಾಯಿಸಿದರು.

ಹೆಣ್ಣು ಅಥವಾ ಗಂಡು ಎನ್ನದೆ ಒಟ್ಟು ಶೇ. 39 ಜನಸಂಖ್ಯೆಗೆ ಅಥವಾ 43 ಕೋಟಿ ಮಕ್ಕಳಿಗೆ ಕಾನೂನಿನ ರಕ್ಷಣೆಯನ್ನು ಈ ಮಸೂದೆ ಒದಗಿಸಲಿದೆ ಎಂದು ಅವರು ಹೇಳಿದರು. ಈ ಮಸೂದೆ ಮಕ್ಕಳ ಅಶ್ಲೀಲ ಚಿತ್ರಗಳ ಬಗ್ಗೆ ಕೂಡ ವ್ಯಾಖ್ಯಾನಿಸುತ್ತದೆ. ಆದುದರಿಂದ ಇಂತಹ ಹೇಯ ಅಪರಾಧದಲ್ಲಿ ತೊಡಗುವ ವಿಕೃತ ಕಾಮಿಗಳನ್ನು ಈ ಮಸೂದೆ ಶಿಕ್ಷಿಸುತ್ತದೆ ಎಂದು ಸ್ಮೃತಿ ಇರಾನಿ ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago