Featured

ಮಗಳು ಬಿಜೆಪಿ ಸೇರಿದ್ದು ನನ್ನ ಎದೆಗೆ ಚೂರಿ ಇರಿದಂತಾಗಿದೆ : ಕಾಗೋಡು ತಿಮ್ಮಪ್ಪ – Vishwanews24

ಮಗಳು ಬಿಜೆಪಿ ಸೇರಿದ್ದು ನನ್ನ ಎದೆಗೆ ಚೂರಿ ಇರಿದಂತಾಗಿದೆ : ಕಾಗೋಡು ತಿಮ್ಮಪ್ಪ

ಶಿವಮೊಗ್ಗ: ಮಗಳು ಬಿಜೆಪಿ ಸೇರಿದ್ದು ನನ್ನ ಎದೆಗೆ ಚೂರಿ ಇರಿದಂತಾಗಿದೆ. ಆಕೆ ಈ ರೀತಿ ಮಾಡುತ್ತಾಳೆ ಎಂದು ನಾನು ಕನಸಿನಲ್ಲಿಯೂ ಆಲೋಚನೆ ಮಾಡಿರಲಿಲ್ಲ. ಮಗಳು ಈ ರೀತಿ ಇದ್ದಾಳೆ ಎನ್ನುವುದು ನನ್ನ ದೌರ್ಭಾಗ್ಯ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪುತ್ರಿ ಡಾ.ರಾಜನಂದಿನಿ ಬಿಜೆಪಿ ಸೇರ್ಪಡೆ ವಿಚಾರವಾಗಿ ಬೇಸರ ವ್ಯಕ್ತಪಡಿಸಿದರು. ಈ ಸುದ್ದಿ ನನಗೆ ಈಗಷ್ಟೇ ಗೊತ್ತಾಗಿದೆ. ಈ ರೀತಿ ಮಾಡುತ್ತಾರೆ ಎಂದು ನಾನು ಕನಸಿನಲ್ಲಿಯೂ ಆಲೋಚಿಸಿರಲಿಲ್ಲ. ನಾನು ರಾಜಕಾರಣದಲ್ಲಿ ಸ್ಥಿರತೆ ಮತ್ತು ಬದ್ಧತೆ ಉಳಿಸಿಕೊಂಡು ಬಂದವನು. ನಾವು ಅದನ್ನೇ ಅನುಸರಿಸಿಕೊಂಡು ಕಾರ್ಯರೂಪಕ್ಕೆ ತರುತ್ತಿದ್ದೇವೆ. ಆ ಸಂತೋಷ ಮತ್ತು ನೆಮ್ಮದಿ ನಮಗಿದೆ ಎಂದರು.

ಏನೇ ಆದರೂ ನಾನು ಕಾಂಗ್ರೆಸ್  ಬಿಟ್ಟು ಹೋಗುವುದಿಲ್ಲ. ಕಾಂಗ್ರೆಸ್ ಪರವಾಗಿ ನಿಲ್ಲುತ್ತೇನೆ ಹಾಗೂ ಅದರ ಪರವಾಗಿ ಕೆಲಸ ಮಾಡುತ್ತೇನೆ. ಮಗಳಿಗೆ ಯಾರೋ ಹಿಂದಿನಿಂದ ಈ ರೀತಿ ಮಾಡಿಸಿದ್ದಾರೆ. . ಅವಳನ್ನು ಸಂಪರ್ಕಿಸಿ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಅವಳು ತನ್ನ ಬಳಿ ಯಾವುದೇ ಬೇಸರ ಹೇಳಿಕೊಂಡಿಲ್ಲ. ನಾನು ಅವಳನ್ನು ಖರ್ಗೆ  ಹತ್ತಿರ ಕರೆದುಕೊಂಡು ಹೋಗಿದ್ದೆ. ಅವಕಾಶ ಇದ್ದರೆ ನೋಡೋಣ ಎಂದಿದ್ದರು. ಕಾಂಗ್ರೆಸ್‌ನಲ್ಲಿಯೇ ಇದ್ದು ರಾಜಕೀಯವಾಗಿ ಬೆಳೆಯಬಹುದಾಗಿತ್ತು. ನನ್ನ ಹತ್ತಿರ ಯಾವುದನ್ನೂ ಹೇಳಿಕೊಂಡಿಲ್ಲ ಎಂದು ಹೇಳಿದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

14 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

15 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

15 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

15 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

15 hours ago