ನವದೆಹಲಿ: ಮಾಜಿ ಪ್ರಧಾನಿ ರಾಜೀವಗಾಂಧಿ ಅವರ ಹತ್ಯೆ ಪ್ರಕರಣದಲ್ಲಿ ವೆಲ್ಲೂರು ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್‌ಗೆ ಮದ್ರಾಸ್ ಹೈಕೋರ್ಟ್ 30 ದಿನಗಳ ಪೆರೋಲ್ ಮಂಜೂರು ಮಾಡಿದೆ.
ಜುಲೈ 5 ರಂದು ಪರೋಲ್ ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್ 1 ತಿಂಗಳ ಷರತ್ತು ಬದ್ಧ ಪರೋಲ್‌ಗೆ ಅನುಮತಿ ನೀಡಿದೆ. ಪೆರೋಲ್ಗಾಗಿ ನಳಿನಿಯೇ ವಾದ ಮಂಡಿಸಿದಳು. ಆರು ತಿಂಗಳ ಅವಧಿ ಬಿಡುಗಡೆ ಕೋರಿ ನಳಿನಿ ಮನವಿ ಮಾಡಿದ್ದಳು. ‘ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ತಮ್ಮನ್ನು ತಪ್ಪಾಗಿ ಶಿಕ್ಷೆಗೆ ಗುರಿಯಾಗಿಸಲಾಗಿದೆ. ತಾಯಿಯಾಗಿ ನನ್ನ ಜವಾಬ್ದಾರಿಯನ್ನು ಪೂರೈಸಬೇಕಿದೆ. ನನ್ನ ಮಗಳ ಮದುವೆ ಸಲುವಾಗಿ ನನ್ನ ಕುಟುಂಬವನ್ನು ಭೇಟಿಯಾಗಬೇಕಿದೆ, ಅಲ್ಲದೆ ದುಡ್ಡಿನ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. ಅದಕ್ಕೆ 6 ತಿಂಗಳ ಪೆರೋಲ್ ನೀಡಿ’ ಎಂದು ಭಾವನಾತ್ಮಕವಾಗಿ ವಾದ ಮಂಡಿಸಿದಳು.
ನಳಿನಿಗೆ ನೀಡುವ ಭದ್ರತಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಕೋರ್ಟ್ ನಿರ್ದೇಶಿಸಿದೆ. 28 ವರ್ಷಗಳಿಂದ ಜೈಲುವಾಸ ಅನುಭವಿಸುತ್ತಿರುವ ನಳಿನಿ ಕಳೆದ ವರ್ಷ ಆಕೆ ತಂದೆ ಅಂತ್ಯಸಂಸ್ಕಾರಕ್ಕೆಂದು ಒಂದು ದಿನದ ಮಟ್ಟಿಗೆ ಪೆರೋಲ್ ಪಡೆದಿದ್ದಳು.
ನಳಿನಿ ಪುತ್ರಿ ಲಂಡನ್ ನಲ್ಲಿ ಮೆಡಿಸಿನ್ ಶಿಕ್ಷಣವನ್ನು ಪಡೆದಿದ್ದಾರೆ. ವೆಲ್ಲೂರಿನಲ್ಲಿ ಇವರ ವಿವಾಹ ಸರಳವಾಗಿ ನೆರವೇರಲಿದೆ ಎಂದು ತಿಳಿದುಬಂದಿದೆ.ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿಗೆ ಗಲ್ಲುಶಿಕ್ಷೆಯನ್ನು ಕೋರ್ಟ್ ವಿಧಿಸಿತ್ತು. ಆದರೆ ಸೋನಿಯಾ ಗಾಂಧಿ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ್ದರು. ಆ ಬಳಿಕ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿ ಕೋರ್ಟ್ ತೀರ್ಪು ನೀಡಿತ್ತು. ತದನಂತರ ನಳಿನಿ ಜೈಲಿನಲ್ಲಿಯೇ ಮಗಳಿಗೆ ಜನ್ಮ ನೀಡಿದ್ದಳು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…