Featured

ಮಡಿಕೇರಿಯಲ್ಲಿ ರಂಪಾಟ ನಡೆಸಿ ಸಾರ್ಜಜನಿಕರ ಆಕ್ರೋಶಕ್ಕೆ ಗುರಿಯಾದ ಹುಚ್ಚ ವೆಂಕಟ್​ -Vishwanews24

ಮಡಿಕೇರಿ:  ಮಡಿಕೇರಿಯಲ್ಲಿ ಹುಚ್ಚಾಟವಾಡಿ ಸಾರ್ಜಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಮಡಿಕೇರಿಯಲ್ಲಿ ಹುಚ್ಚ ವೆಂಕಟ್​ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ ಕೆಎಸ್ ಆರ್ ಟಿಸಿ ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.

ಹುಚ್ಚ ವೆಂಕಟ್ ಮಡಿಕೇರಿ ನಗರದ ಡಿಪೋ ಬಳಿ ಕಾಣಿಸಿಕೊಂಡು, ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದರು. ಈ ವೇಳೆ ನಾಪೋಕ್ಲುವಿನ ದಿಲೀಪ್ ಎಂಬವರು ತಮ್ಮ ಕಾರನ್ನು ಡಿಪೋ ಬಳಿ ನಿಲ್ಲಿಸಿ ಸಮೀಪದ ಎಟಿಎಂಗೆ ಹೋಗಿದ್ದರು. ಎಟಿಎಂನಿಂದ ಹಿಂತಿರುಗುತ್ತಿದ್ದ ದಿಲೀಪ್ ಸಾಮಾನ್ಯವಾಗಿಯೇ ಹುಚ್ಚ ವೆಂಕಟ್ ಅವರನ್ನು ನೋಡಿದ್ದಾರೆ. ಇಷ್ಟಕ್ಕೆ ಕೆರಳಿದ ಹುಚ್ಚ ವೆಂಕಟ್ ‘ನನ್ನ ಯಾಕೆ ಗುರಾಯಿಸುತ್ತಿದ್ದೀಯಾ’ ಎಂದು ತಕರಾರು ಎತ್ತಿದ್ದಾರೆ.

ಹುಚ್ಚ ವೆಂಕಟ್ ಹುಚ್ಚಾಟವನ್ನು ಗಮನಿಸುತ್ತಿದ್ದ ಸ್ಥಳೀಯರು ಕೋಪಗೊಂಡು, ಬುದ್ಧಿ ಹೇಳಲು ಮುಂದಾದರು. ಆದರೆ ಹುಚ್ಚ ವೆಂಕಟ್ ಸುಮ್ಮನಾಗದಿದ್ದಾಗ ಸುತ್ತುವರಿದ ಸಾರ್ವಜನಿಕರು ದಿಲೀಪ್ ಕೈಯಿಂದ ಹಲ್ಲೆ ನಡೆಸಿದ್ದಲ್ಲದೆ, ತಾವೂ ಕೂಡ ಥಳಿಸಿದ್ದಾರೆ.

ಈ ಬಗ್ಗೆ ಸಾರ್ವಜನಿಕರು ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ಪೊಲೀಸರು ಹುಚ್ಚ ವೆಂಕಟ್ ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago