ಉಡುಪಿ : ಸರ್ವ ಸಂಘಟನೆಗಳ ಮರಳಿಗಾಗಿ ಹೋರಾಟ ಸಮಿತಿ ಮತ್ತು rotary ಕಲ್ಯಾಣಪುರ ಇವರ ವತಿಯಿಂದ ನೆರೆಪೀಡಿತ ಮಡಿಕೇರಿಯ ಸಂತ್ರಸ್ತರಿಗಾಗಿ ಅಗತ್ಯ ವಸ್ತುಗಳ ಸಂಗ್ರಹಣೆಯನ್ನು ಉದಾರ ದಾನಿಗಳಿಂದ ಸಂಗ್ರಹಿಸುವ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾಧಿಕಾರಿ ಯವರಾದ ಶ್ರೀಮತಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಚಾಲನೆಯನ್ನು ನೀಡಿದರು.
ಬೆಳಗಿನಿಂದ ಸಂಜೆಯವರೆಗೆ ಸುಮಾರು ಒಂದು ಲಕ್ಷದ ಎಂಬತ್ತು ಸಾವಿರ ಗಿಂತಲೂ ಹೆಚ್ಚಿನ ಸಾಮಗ್ರಿಗಳನ್ನು ಸಂಗ್ರಹಿಸಲಾಯಿತು ಸಂಜೆ 5 ಗಂಟೆಗೆ ಉಡುಪಿಯಿಂದ ಸುಮಾರು 10 ಜನರನ್ನು ಒಳಗೊಂಡ ತಂಡ ಸಂಗ್ರಹಿಸಿದ ಸಾಮಗ್ರಿಗಳೊಂದಿಗೆ ಮಡಿಕೇರಿಗೆ ರವಾನಿಸಲಾಯಿತು.
ಜಿಲ್ಲಾಧಿಕಾರಿಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂದರ್ಭ ಅಪರ ಜಿಲ್ಲಾಧಿಕಾರಿಯವರು ಹಾಗೂ ಸರ್ವ ಸಂಘಟನೆಗಳ ಮರಳಿಗಾಗಿ ಹೋರಾಟ ಸಮಿತಿಯ ಸಂಚಾಲಕರುಗಳಾದ ಎಂ. ಜಿ. ನಾಗೇಂದ್ರ ರಾಘವೇಂದ್ರ ಶೆಟ್ಟಿ , ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಅನ್ಸರ್ ಅಹ್ಮದ್, ಸುಧೀರ್ ಪೂಜಾರಿ, ವಸ್ತುಗಳನ್ನು ದಾನವಾಗಿ ನೀಡಿದ ಉದಯ ಪೂಜಾರಿ ಅಮ್ಮುಂಜೆ, ಪರ್ವೇಜ್ ಅಹಮದ್ ಫಿರೋಜ್ ಅಹ್ಮದ್, ಪ್ರವೀಣ್ ಬಾರ್ಕೂರು ಮತ್ತು ಉದಯ ಕಿರಣ್ ರವರು ಉಪಸ್ಥಿತರಿದ್ದರು.
ಸಂಗ್ರಹಿಸಿದ ವಸ್ತುಗಳಲ್ಲಿ ಬಿಸ್ಕಿಟ್, ಬ್ರೆಡ್ಡು, ಹಾಲು, ಹಾಲಿನ ಹುಡಿ,ಬಟ್ಟೆಗಳು, ಸ್ಯಾನಿಟರಿ ಪ್ಯಾಡ್ ಗಳು ಹಾಗೂ 2200 ಚಪ್ಪಲಿಗಳು, ನೀರಿನ ಬಾಟಲಿಗಳು,ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ಒಳಗೊಂಡಿತ್ತು..
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…