ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ಮೂರು ಹಸುಗಳು ಹುಲ್ಲು ಮೇಯುತ್ತಾ, ನರೇಂದ್ರ ನಾಯ್ಡು ಎಂಬುವವರ ಎಸ್ಟೇಟ್ಗೆ ನುಗ್ಗಿದ್ದು, ನನ್ನ ಜಾಗದಲ್ಲಿ ಮೇಯುತ್ತಿದೆ ಎಂಬ ಕಾರಣಕ್ಕಾಗಿ ಎಸ್ಟೇಟ್ ಮಾಲೀಕ ಮೂರು ಹಸುಗಳಲ್ಲಿ ಎರಡು ಹಸುಗಳನ್ನು ಗುಂಡಿಟ್ಟು ಕೊಂದು ಹಾಕಿದ್ದಾನೆ.
ಸಿ.ಕೆ.ಮಣಿ ಎಂಬುವರಿಗೆ ಸೇರಿದ ಹಸುಗಳಾಗಿದ್ದು, ಹಲವು ಹಸುಗಳನ್ನು ಸಾಕಿದ್ದ ಇವರು ಹಾಲು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಆದರೆ ಮೊನ್ನೆ (ಡಿ.5) ಮಣಿಯ ಮೂರು ಹಸುಗಳಲ್ಲಿ ಒಂದು ಮಾತ್ರ ಮನೆಗೆ ಹಿಂದಿರುಗಿತ್ತು. ಆ ಹಸು ಕೂಡ ಗಂಭೀರವಾಗಿ ಗಾಯಗೊಂಡಿರುವುದನ್ನು ಮಣಿ ಗಮನಿಸಿದ್ದಾರೆ. ನಂತರ ಹಸುವಿಗೆ ಗುಂಡು ತಗುಲಿದ್ದು ಗೊತ್ತಾಗಿ ಚಿಕಿತ್ಸೆ ನೀಡಲಾಗಿದೆ. ಇನ್ನು ಉಳಿದ ಎರಡು ಹಸುಗಳು ಪಕ್ಕದ ಎಸ್ಟೇಟ್‌ನಲ್ಲಿ ಸತ್ತು ಬಿದ್ದಿರುವ ಬಗ್ಗೆ ಮಾಹಿತಿ ಬಂದಿದ್ದು. ಮಣಿ ಅವರು ಹುಡುಕಾಡಲು ಹೋದಾಗ ನರೇಂದ್ರ ನಾಯ್ಡು ಒಡೆತನದ ಎಸ್ಟೇಟ್‌ನಲ್ಲಿ ಹಸುಗಳ ದೇಹ ಪತ್ತೆಯಾಗಿದೆ.
ಹಸುಗಳ ದೇಹದ ಮೇಲೆ ಗುಂಡಿನ ಗುರುತುಗಳಿದ್ದು, ತನ್ನ ಹಸುಗಳನ್ನು ಗುಂಡಿಟ್ಟು ಕೊಲ್ಲಲಾಗಿದೆ ಎಂದು ಮಣಿ ಆರೋಪಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಸಿ.ಕೆ.ಮಣಿ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಸ್ಟೇಟ್ ಮಾಲೀಕನ ಹುಡುಕಾಟದಲ್ಲಿದ್ದಾರೆ. ಎಸ್ಟೇಟ್ ಮಾಲಿಕ ನರೇಂದ್ರ ನಾಯ್ಡು ತಲೆಮರೆಸಿಕೊಂಡಿದ್ದು, ಪೊಲೀಸರು ಅರೋಪಿಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…