ಮಡಿಕೇರಿ : ಸಾಕಾನೆ ಮೈಮೇಲೆ ಬಿದ್ದ ಪರಿಣಾಮ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗಿನ ಹೆಸರುವಾಸಿ ಪ್ರವಾಸಿ ತಾಣ ದುಬಾರೆಯಲ್ಲಿ ನಡೆದಿದೆ.
ಚೆನ್ನೈ ಮೂಲದ ಪಲ್ಲಾವರಂ ನ ನಿವಾಸಿ ಜಿನ್ಶು (32) ಮೃತ ಮಹಿಳೆ. ಇವರ ಪತಿ ಜೋಯಲ್ ಅವರಿಗೂ ಗಾಯಗಳಾಗಿವೆ. “ಮಕ್ನಾ” ಎಂಬ ಹೆಸರಿನ ಸಾಕಾನೆಯನ್ನು ದುಬಾರೆ ಸಾಕಾನೆ ಶಿಬಿರ ವ್ಯಾಪ್ತಿಯ ನದಿಯಲ್ಲಿ ಸ್ನಾನ ಮಾಡಿಸುತ್ತಿದ್ದ ದೃಶ್ಯವನ್ನು ಪ್ರವಾಸಿಗರು ವೀಕ್ಷಿಸುತ್ತಿದ್ದರು. ಈ ಸಂದರ್ಭ “ಕಂಜನ್” ಎಂಬ ಮತ್ತೊಂದು ಸಾಕಾನೆಗೆ ಮದವೇರಿ, ಏಕಾಏಕಿ ಮಕ್ನಾ ಆನೆ ಮೇಲೆ ದಾಳಿ ಮಾಡಿದೆ. ಈ ವೇಳೆ ಮಕ್ನಾ ಆನೆ ಕೆಳಗೆ ಬಿದ್ದಿದ್ದು, ಇದರ ಪಕ್ಕದಲ್ಲಿದ್ದ ಜಿನ್ಶು ಅವರು ಆನೆಯ ಅಡಿಯಲ್ಲಿ ಸಿಲುಕಿ ತೀವ್ರವಾಗಿ ಗಾಯಗೊಂಡರು.
ಇದನ್ನೂ ಓದಿ :
ಕೂಡಲೇ ಜಿನ್ಶು ಅವರನ್ನು ಕುಶಾಲನಗರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು. ಗಾಯಗೊಂಡ ಪತಿ ಜೋಯಲ್ ಗೆ ಚಿಕಿತ್ಸೆ ನೀಡಲಾಗಿದೆ.
ನದಿಯಲ್ಲಿ ಸಾಕಾನೆ “ಕಂಜನ್” ಮಕ್ನಾ ಆನೆ ಮೇಲೆ ದಾಳಿ ಮುಂದುವರಿಸುತ್ತಲೇ ಇದ್ದಾಗ ಆತಂಕಗೊಂಡ ಪ್ರವಾಸಿಗರು ಸ್ಥಳದಿಂದ ಚದುರಿದರು. ಘಟನೆ ಸಂದರ್ಭ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಸ್ಥಳದಲ್ಲಿದ್ದರಾದರೂ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಅನಿರೀಕ್ಷಿತವಾಗಿ ನಡೆದ ಈ ಘಟನೆಯಿಂದ ಪ್ರವಾಸಿಗರು ಆಘಾತಗೊಂಡಿದ್ದಾರೆ.
ಇದನ್ನೂ ಓದಿ :
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…