ಮಡಿಕೇರಿ  :  ನಕ್ಸಲರ ಸಂಚಾರದ ಶಂಕೆ – ಪೊಲೀಸ್ ಕಟ್ಟೆಚ್ಚರ ; ಕೂಂಬಿಂಗ್ ಆರಂಭ – Vishwanews24

Featured, ದಕ್ಷಿಣ ಕನ್ನಡ

ಮಡಿಕೇರಿ  :  ನಕ್ಸಲರ ಸಂಚಾರದ ಶಂಕೆ: ಪೊಲೀಸ್ ಕಟ್ಟೆಚ್ಚರ – ಕೂಂಬಿಂಗ್ ಆರಂಭ

ಮಡಿಕೇರಿ: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಕ್ಸಲರು ಸಂಚರಿಸಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ನಾಲ್ವರಿಂದ ಐವರು ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕೂಜಿಮಲೆ ಕಡಮಕಲ್ಲು ಭಾಗದ ಅಂಗಡಿಯೊಂದರಿಂದ ತಂಡವೊಂದು ದಿನಸಿ ಸಾಮಗ್ರಿ ಖರೀದಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ತಂಡವು ನಮ್ಮನ್ನು ಅರಣ್ಯ ಸಿಬ್ಬಂದಿ ಕಳುಹಿಸಿದ್ದಾರೆ ಎಂದು ಅಂಗಡಿಯವನ ಬಳಿ ಹೇಳಿಕೊಂಡಿದ್ದಾರೆ. ದಿನಸಿ ಪಡೆದು ಮರಳಿದ ನಂತರ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದಾರೆ. ಅಂಗಡಿಯವನು ನಡೆದ ವಿಚಾರ ತಿಳಿಸಿದಾಗ ಅರಣ್ಯ ಸಿಬ್ಬಂದಿ ನಾವು ಯಾರನ್ನೂ ಕಳುಹಿಸಿಲ್ಲವೆಂದು ಹೇಳಿದ್ದಾರೆ.

ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಸದಾನಂದ ಗೌಡರಿಗೆ ಅಫರ್‌ ನೀಡಿದ ಡಿಕೆಶಿ – Vishwanews24

 

ಕೂಂಬಿಂಗ್ ಆರಂಭ: ಶಂಕಿತ ನಕ್ಸಲ್ ಪ್ರತ್ಯಕ್ಷದ ಹಿನ್ನೆಲೆಯಲ್ಲಿ ಸ್ಥಳಕ್ಕೆ ನಕ್ಸಲ್ ನಿಗ್ರಹ ಪಡೆ ಆಗಮಿಸಿದ್ದು, ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ.
2012ರಲ್ಲಿ ಮಡಿಕೇರಿ ತಾಲೂಕಿನ ಕಾಲೂರು ಗ್ರಾಮದಲ್ಲಿ ಮತ್ತು 2018ರಲ್ಲಿ ಸಂಪಾಜೆಯ ಗುಡ್ಡೆಗದ್ದೆಯಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಇದೀಗ ಕೂಜಿಮಲೆ ಕಡಮಕಲ್ಲು ಭಾಗದಲ್ಲಿ ನಕ್ಸಲ್ ಸಂಚಾರದ ಶಂಕೆ ವ್ಯಕ್ತವಾಗಿದ್ದು, ಲೋಕಸಭಾ ಚುನಾವಣೆಯ ಹಿನ್ನೆಲೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಕೂಜಿಮಲೆ ಕಡಮಕಲ್ಲು ಬೆಟ್ಟ ಪ್ರದೇಶದಿಂದ ಕೂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಪ್ರದೇಶ ವ್ಯಾಪಿಸಿದೆ.

ಉಳ್ಳಾಲ: ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು – Vishwanews24

Leave a Reply