ಮಡಿಕೇರಿ: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಕ್ಸಲರು ಸಂಚರಿಸಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ನಾಲ್ವರಿಂದ ಐವರು ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕೂಜಿಮಲೆ ಕಡಮಕಲ್ಲು ಭಾಗದ ಅಂಗಡಿಯೊಂದರಿಂದ ತಂಡವೊಂದು ದಿನಸಿ ಸಾಮಗ್ರಿ ಖರೀದಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ತಂಡವು ನಮ್ಮನ್ನು ಅರಣ್ಯ ಸಿಬ್ಬಂದಿ ಕಳುಹಿಸಿದ್ದಾರೆ ಎಂದು ಅಂಗಡಿಯವನ ಬಳಿ ಹೇಳಿಕೊಂಡಿದ್ದಾರೆ. ದಿನಸಿ ಪಡೆದು ಮರಳಿದ ನಂತರ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದಾರೆ. ಅಂಗಡಿಯವನು ನಡೆದ ವಿಚಾರ ತಿಳಿಸಿದಾಗ ಅರಣ್ಯ ಸಿಬ್ಬಂದಿ ನಾವು ಯಾರನ್ನೂ ಕಳುಹಿಸಿಲ್ಲವೆಂದು ಹೇಳಿದ್ದಾರೆ.
ಕೂಂಬಿಂಗ್ ಆರಂಭ: ಶಂಕಿತ ನಕ್ಸಲ್ ಪ್ರತ್ಯಕ್ಷದ ಹಿನ್ನೆಲೆಯಲ್ಲಿ ಸ್ಥಳಕ್ಕೆ ನಕ್ಸಲ್ ನಿಗ್ರಹ ಪಡೆ ಆಗಮಿಸಿದ್ದು, ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ.
2012ರಲ್ಲಿ ಮಡಿಕೇರಿ ತಾಲೂಕಿನ ಕಾಲೂರು ಗ್ರಾಮದಲ್ಲಿ ಮತ್ತು 2018ರಲ್ಲಿ ಸಂಪಾಜೆಯ ಗುಡ್ಡೆಗದ್ದೆಯಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಇದೀಗ ಕೂಜಿಮಲೆ ಕಡಮಕಲ್ಲು ಭಾಗದಲ್ಲಿ ನಕ್ಸಲ್ ಸಂಚಾರದ ಶಂಕೆ ವ್ಯಕ್ತವಾಗಿದ್ದು, ಲೋಕಸಭಾ ಚುನಾವಣೆಯ ಹಿನ್ನೆಲೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಕೂಜಿಮಲೆ ಕಡಮಕಲ್ಲು ಬೆಟ್ಟ ಪ್ರದೇಶದಿಂದ ಕೂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಪ್ರದೇಶ ವ್ಯಾಪಿಸಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…