ಮಡಿಕೇರಿ : ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದಲ್ಲಿ ನಡೆದಿದೆ.
ಎಮ್ಮೆಮಾಡು ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫೀನಾ ಶೇಕ್ (32) ಸಾವನ್ನಪ್ಪಿರುವ ಶಿಕ್ಷಕಿ.
ಮೃತರ ಕುಟುಂಬಸ್ಥರ ಆರೋಪದ ಹಿನ್ನೆಲೆ ಇದೊಂದು ಸಂಶಯಾಸ್ಪದ ಸಾವೆಂದು ಪ್ರಕರಣ ದಾಖಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಸಫ್ರಿನ್ ಮತ್ತು ನಝೀರ್ ನಡುವೆ ನಿನ್ನೆ (ಜು.23) ತೀವ್ರ ಜಗಳ ನಡೆದಿತ್ತು. ಅದಾದ ಬಳಿಕ ತಡರಾತ್ರಿ ಮನೆಗೆ ಬಂದ ನಝೀರ್, ಸಫ್ರಿನ್ ನೇಣುಬಿಗಿದ ಸ್ಥಿತಿಯಲ್ಲಿ ಸಿಕ್ಕಿದ್ದಾಳೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಈ ವರದಿ ಬಗ್ಗೆ ಸಫ್ರಿನ್ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ವರದಿ ಬಂದ ಬಳಿಕ ತನಿಖೆ ಇನ್ನಷ್ಟು ಗಂಭೀರ ರೀತಿಯಲ್ಲಿ ಮುಂದುವರೆಯಲಿದೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…