ಮಡಿಕೇರಿ: ಹುಲಿಗಳು ಎಂದಿಗೂ ಮನುಷ್ಯನ ಮೇಲೆ ಎದುರು ಭಾಗದಿಂದ ನೇರವಾಗಿ ದಾಳಿ ಮಾಡುವುದಿಲ್ಲ, ಬದಲಾಗಿ ಹಿಂಬದಿಯಿಂದ ದಾಳಿ ಮಾಡುತ್ತವೆ. ಇದರಿಂದ ಪಾರಾಗಲು ಪಶ್ಚಿಮ ಬಂಗಾಲದ ಸುಂದರ ಬನ್ ವ್ಯಾಪ್ತಿಯಲ್ಲಿ ತಲೆಯ ಹಿಂಭಾಗಕ್ಕೆ ಮುಖವಾಡವನ್ನು ಅಳವಡಿಸಿಕೊಳ್ಳುವ ತಂತ್ರಗಾರಿಕೆಯನ್ನು ಅನುಸರಿಸಲಾಗುತ್ತಿದ್ದು, ಇದು ಫಲಪ್ರದವಾಗಿದೆ.
ಈ ಮಾದರಿ ಕೊಡಗು ಜಿಲ್ಲೆಯಲ್ಲೂ ಉಪಯುಕ್ತವಾಗಬಹುದು ಎಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಕರ್ನಲ್ ಸಿ.ಪಿ. ಮುತ್ತಣ್ಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಲದಲ್ಲಿ ಬ್ರಹ್ಮಪುತ್ರ ನದಿ ಸಮುದ್ರ ವನ್ನು ಸೇರುವ ಸುಂದರಬನ್‌ನಲ್ಲಿ ಹುಲಿ ದಾಳಿಗೆ ಸಾಕಷ್ಟು ಮಂದಿ ಸಾವನ್ನಪ್ಪಿದ್ದು, ಅಲ್ಲಿ ಇದೀಗ ತಲೆಯ ಹಿಂಭಾಗಕ್ಕೆ ಅಳವಡಿಸುವ ಮುಖವಾಡ ಬಳಸಲಾಗುತ್ತಿದೆ. ಇದರಿಂದ ಹುಲಿ ದಾಳಿ ಪ್ರಕರಣಗಳು ಇಳಿಮುಖವಾಗಿದೆ. ಈ ಮುಖ ವಾಡ ಧರಿಸಿದಲ್ಲಿ, ದಾಳಿ ಮಾಡುವ ಹುಲಿಗೆ ವ್ಯಕ್ತಿಯ ಹಿಂಭಾಗದ ಮುಖವಾಡ ವ್ಯಕ್ತಿಯ ಮುಖದಂತೆ ಗೋಚರಿಸುವುದರಿಂದ ದಾಳಿಗೆ ಮುಂದಾಗುವುದಿಲ್ಲವೆಂದು ಗಮನ ಸೆಳೆದರು.
ಕೊಡಗು ಜಿಲ್ಲೆಯ ದಕ್ಷಿಣ ಭಾಗದಲ್ಲಿ ಹುಲಿಹಾವಳಿ ಹೆಚ್ಚಾಗುತ್ತಿದ್ದು, ಈಗಾಗಲೆ ಐವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ರಬ್ಬರ್‌ನಿಂದ ಸಿದ್ಧಪಡಿಸಿದ ಮುಖವಾಡವನ್ನು ಬಳಸುವುದಕ್ಕೆ ಕ್ರಮ ಕೈಗೊಳ್ಳುವಂತೆ ಸರಕಾರ ಮತ್ತು ಅರಣ್ಯ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಾಗಿ ಮುತ್ತಣ್ಣ ಹೇಳಿದರು.
ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ಸಾವನ್ನಪ್ಪಿದ ಪ್ರಕರಣಗಳನ್ನು ಗಮನಿಸಿದಾಗ ಬೆಳಗ್ಗಿನ ಜಾವ ಬಹಿರ್ದೆಸೆಗೆಂದು ತೆರಳಿದವರ ಮೇಲೆ ಹುಲಿ ಹಿಂಬದಿಯಿಂದ ದಾಳಿ ನಡೆಸಿ ಕೊಂದು ಹಾಕಿರುವುದು ಸ್ಪಷ್ಟವಾಗುತ್ತಿದೆ. ಜಿಲ್ಲೆಯಲ್ಲಿ ಬಯಲು ಶೌಚ ಇಲ್ಲವೆಂದು ಹೇಳಿಕೊಳ್ಳಲಾಗುತ್ತದೆಯಾದರೂ ಸಾಕಷ್ಟು ಕಡೆಗಳಲ್ಲಿ ಇಂದಿಗೂ ಮನೆಗಳಲ್ಲಿ ಶೌಚಾಲಯಗಳ ವ್ಯವಸ್ಥೆ ಇಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಶೌಚಾಲಯಗಳಿಲ್ಲದ ಮನೆಗಳಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ಸರಕಾರ ಸೂಕ್ತ ಯೋಜನೆ ರೂಪಿಸುವುದು ಅವಶ್ಯಕ. ಬಯಲು ಶೌಚದಿಂದಾಗಿಯೇ ಸಾಕಷ್ಟು ಮಂದಿ ಹುಲಿ ದಾಳಿಗೆ ಸಿಲುಕುತ್ತಿರುವುದು ಗಮನಾರ್ಹ ಎಂದರು.
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…
ಕ್ಯಾನ್ಸರ್‌ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ ಕೊಚ್ಚಿ : ಮಲಯಾಳಂ ಕಿರುತೆರೆಯ ಜನಪ್ರಿಯ ನಟ ಸಿದ್ದಾರ್ಥ್ ವೇಣುಗೋಪಾಲ್…
ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ : ಸಿಎಂ ಬೆಂಗಳೂರು: ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ.…
ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ…
ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ…
ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್ ಅಶೋಕ್ ಬೆಂಗಳೂರು:ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್…