ಮಣಿಪಾಲದಲ್ಲಿ ಬೈಕ್ ಕಳವು ಪ್ರಕರಣ: ಆರೋಪಿ ಬಂಧನ – vishwanews24
ಮಣಿಪಾಲದಲ್ಲಿ ಬೈಕ್ ಕಳ್ಳತನ ಪ್ರಕರಣ: ಆರೋಪಿ ಬಂಧನ, ದ್ವಿಚಕ್ರ ವಾಹನ ವಶಕ್ಕೆ
ಉಡುಪಿ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದು, ಕಳವಾಗಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಆರ್ಎಸ್ಬಿ ಸಭಾಂಗಣದ ಸಮೀಪವಿರುವ ವೇಗಾ ಟ್ರಾನ್ಸ್ಪೋರ್ಟ್ಸ್ ಬಳಿಯ ಶೆಡ್ನಲ್ಲಿ ಅಕ್ಟೋಬರ್ 20ರಂದು ಬೆಳಗ್ಗೆ 9.30ರ ಸುಮಾರಿಗೆ ಹೋಂಡಾ ಶೈನ್ ಬೈಕ್ ನಿಲ್ಲಿಸಲಾಗಿತ್ತು. ಬೈಕ್ ಮಾಲೀಕರು ಹುಬ್ಬಳ್ಳಿಗೆ ತೆರಳಿದ್ದು, ಅಕ್ಟೋಬರ್ 22ರಂದು ರಾತ್ರಿ 9 ಗಂಟೆಗೆ ವಾಪಸಾದಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಮಂಗಳೂರು : ಬೋಲಾಸ್ ಘಟಕಕ್ಕೆ ಆರೋಗ್ಯ ಇಲಾಖೆ ದಾಳಿ ; 1,240 ಕೆ.ಜಿ. ನಕಲಿ ಅಡುಗೆ ಎಣ್ಣೆ ಜಪ್ತಿ – vishwanews24
ನವೆಂಬರ್ 18ರಂದು ಶಿವಳ್ಳಿ ಗ್ರಾಮದ ಮಣ್ಣಪಳ್ಳ ಕೆರೆ ರಸ್ತೆಯ ಬಳಿ ಮಣಿಪಾಲ ಪೊಲೀಸ್ ತಂಡವು ಎಂದಿನಂತೆ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, ಅನುಮಾನಾಸ್ಪದವಾಗಿ ಬರುತ್ತಿದ್ದ ಬೈಕ್ ಸವಾರನನ್ನು ತಡೆದು ನಿಲ್ಲಿಸಿದೆ. ವಾಹನದ ದಾಖಲೆಗಳನ್ನು ಪರಿಶೀಲಿಸಿದಾಗ ಅದು ಕಳವಾಗಿದ್ದ ಹೋಂಡಾ ಶೈನ್ ಬೈಕ್ ಎಂಬುದು ದೃಢಪಟ್ಟಿದೆ.
ಬಂಧಿತ ಆರೋಪಿಯನ್ನು ಬೆಂಗಳೂರಿನ ಮಾರೇನಹಳ್ಳಿ ನಿವಾಸಿ ಮನೀಶ್ ಎ. ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಆತ ಬೈಕ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ಜಪ್ತಿ ಮಾಡಿದ್ದಾರೆ.
ರೈಲ್ವೆ ಕಾಮಗಾರಿ ಹಿನ್ನಲೆ : ಹಲವು ಎಕ್ಸ್ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲಾವಣೆ – vishwanews24
ಉಡುಪಿ ಉಪವಿಭಾಗದ ಡಿವೈಎಸ್ಪಿ ಕೆ.ಯು. ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ, ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ಶಂಭುಲಿಂಗಯ್ಯ ಎಂ. ಹಾಗೂ ಸಿಬ್ಬಂದಿಗಳಾದ ಎಎಸ್ಐ ವಿವೇಕಾನಂದ, ಹೆಡ್ ಕಾನ್ಸ್ಟೆಬಲ್ ಮೊಹಮ್ಮದ್ ಅಜ್ಮಲ್ ಮತ್ತು ಪೊಲೀಸ್ ಕಾನ್ಸ್ಟೆಬಲ್ ಮಂಜುನಾಥ್ ಎಂ.ಆರ್. ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.
