Featured

ಮಣಿಪಾಲದಲ್ಲಿ ಬೈಕ್ ಕಳವು ಪ್ರಕರಣ: ಆರೋಪಿ ಬಂಧನ – vishwanews24

ಮಣಿಪಾಲದಲ್ಲಿ ಬೈಕ್ ಕಳ್ಳತನ ಪ್ರಕರಣ: ಆರೋಪಿ ಬಂಧನ,  ದ್ವಿಚಕ್ರ ವಾಹನ ವಶಕ್ಕೆ

ಉಡುಪಿ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದು, ಕಳವಾಗಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಆರ್‌ಎಸ್‌ಬಿ ಸಭಾಂಗಣದ ಸಮೀಪವಿರುವ ವೇಗಾ ಟ್ರಾನ್ಸ್‌ಪೋರ್ಟ್ಸ್ ಬಳಿಯ ಶೆಡ್‌ನಲ್ಲಿ ಅಕ್ಟೋಬರ್ 20ರಂದು ಬೆಳಗ್ಗೆ 9.30ರ ಸುಮಾರಿಗೆ ಹೋಂಡಾ ಶೈನ್ ಬೈಕ್ ನಿಲ್ಲಿಸಲಾಗಿತ್ತು. ಬೈಕ್ ಮಾಲೀಕರು ಹುಬ್ಬಳ್ಳಿಗೆ ತೆರಳಿದ್ದು, ಅಕ್ಟೋಬರ್ 22ರಂದು ರಾತ್ರಿ 9 ಗಂಟೆಗೆ ವಾಪಸಾದಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ನವೆಂಬರ್ 18ರಂದು ಶಿವಳ್ಳಿ ಗ್ರಾಮದ ಮಣ್ಣಪಳ್ಳ ಕೆರೆ ರಸ್ತೆಯ ಬಳಿ ಮಣಿಪಾಲ ಪೊಲೀಸ್ ತಂಡವು ಎಂದಿನಂತೆ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, ಅನುಮಾನಾಸ್ಪದವಾಗಿ ಬರುತ್ತಿದ್ದ ಬೈಕ್ ಸವಾರನನ್ನು ತಡೆದು ನಿಲ್ಲಿಸಿದೆ. ವಾಹನದ ದಾಖಲೆಗಳನ್ನು ಪರಿಶೀಲಿಸಿದಾಗ ಅದು ಕಳವಾಗಿದ್ದ ಹೋಂಡಾ ಶೈನ್ ಬೈಕ್ ಎಂಬುದು ದೃಢಪಟ್ಟಿದೆ.

ಬಂಧಿತ ಆರೋಪಿಯನ್ನು ಬೆಂಗಳೂರಿನ ಮಾರೇನಹಳ್ಳಿ ನಿವಾಸಿ ಮನೀಶ್ ಎ. ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಆತ ಬೈಕ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ಜಪ್ತಿ ಮಾಡಿದ್ದಾರೆ.

ಉಡುಪಿ ಉಪವಿಭಾಗದ ಡಿವೈಎಸ್‌ಪಿ ಕೆ.ಯು. ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ, ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್‌ಐ ಶಂಭುಲಿಂಗಯ್ಯ ಎಂ. ಹಾಗೂ ಸಿಬ್ಬಂದಿಗಳಾದ ಎಎಸ್‌ಐ ವಿವೇಕಾನಂದ, ಹೆಡ್ ಕಾನ್‌ಸ್ಟೆಬಲ್ ಮೊಹಮ್ಮದ್ ಅಜ್ಮಲ್ ಮತ್ತು ಪೊಲೀಸ್ ಕಾನ್‌ಸ್ಟೆಬಲ್ ಮಂಜುನಾಥ್ ಎಂ.ಆರ್. ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.

Vishwa News 24

Recent Posts

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

1 second ago

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

11 minutes ago

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ – vishwanews24

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…

18 minutes ago

ಮಂಗಳೂರು :  ಬೋಲಾಸ್ ಘಟಕಕ್ಕೆ ಆರೋಗ್ಯ ಇಲಾಖೆ ದಾಳಿ ; 1,240 ಕೆ.ಜಿ. ನಕಲಿ ಅಡುಗೆ ಎಣ್ಣೆ ಜಪ್ತಿ – vishwanews24

ಮಂಗಳೂರು :  ಬೋಲಾಸ್ ಘಟಕಕ್ಕೆ ಆರೋಗ್ಯ ಇಲಾಖೆ ದಾಳಿ ;  1,240 ಕೆ.ಜಿ. ನಕಲಿ ಅಡುಗೆ ಎಣ್ಣೆ ಜಪ್ತಿ ಮಂಗಳೂರು…

30 minutes ago

ರೈಲ್ವೆ ಕಾಮಗಾರಿ ಹಿನ್ನಲೆ : ಹಲವು ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲಾವಣೆ – vishwanews24

ರೈಲು ಪ್ರಯಾಣಿಕರ ಗಮನಕ್ಕೆ: ರೈಲ್ವೆ ಕಾಮಗಾರಿ ಹಿನ್ನಲೆ - ಪ್ರಮುಖ ರೈಲುಗಳ ಸಮಯ ಬದಲಾವಣೆ ಬೆಂಗಳೂರು:ರೈಲ್ವೆ ಕಾಮಗಾರಿ ಹಿನ್ನೆಲೆ ನೈರುತ್ಯ…

2 hours ago

ಮಂಗಳೂರು: ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಒ ಆಗಿ ಉದಯ ಕುಮಾರ್ ಹೆಬ್ಬಾರ್ ನೇಮಕ – vishwanews24

ಮಂಗಳೂರು: ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಒ ಆಗಿ ಉದಯ ಕುಮಾರ್ ಹೆಬ್ಬಾರ್ ನೇಮಕ ಮಂಗಳೂರು : ಶತಮಾನಕ್ಕೂ ಅಧಿಕ…

2 hours ago