Featured

ಮಣಿಪಾಲದಲ್ಲಿ ಮತ್ತೆ ಇ-ಸಿಗರೇಟ್ ಹಾವಳಿ ; ಮಾರಾಟ ಜಾಲ ಪತ್ತೆ – vishwanews24

ಮಣಿಪಾಲದಲ್ಲಿ ಮತ್ತೆ ಇ-ಸಿಗರೇಟ್ ಮಾರಾಟ ಜಾಲ ಪತ್ತೆ

ಮಣಿಪಾಲ: ಇ-ಸಿಗರೇಟ್ ಮಾರಾಟ ಮಾಡಲು ನಿಷೇಧ ಹೇರಲಾಗಿದೆ. ಆದಗ್ಯೂ ಮಣಿಪಾಲ ಭಾಗದಲ್ಲಿ ಮತ್ತೆ ಇ-ಸಿಗರೇಟ್ ಹಾವಳಿ ಹೆಚ್ಚಾಗಿ ಕಂಡು ಬರುತ್ತಿದೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯ ಬದಿ ಇರುವ ಅಂಗಡಿಯಲ್ಲಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಕಾಸರಗೋಡು ಮೂಲದ ಮೊಹಮ್ಮದ್ ಉನೈಶ್(25) ಹಾಗೂ ಸಾವಿರಾರು ರೂ.ಮೌಲ್ಯದ ಇ-ಸಿಗರೇಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದು ಆರೋಪಿಯನ್ನು ವಿಚಾರಣೆ ನಡೆಸಿದ ವೇಳೆ ಆತ ಮತ್ತೋರ್ವನೊಂದಿಗೆ ಸೇರಿಕೊಂಡು ಈ ವ್ಯವಹಾರ ಮಾಡುತ್ತಿರುವುದಾಗಿ ಹೇಳಿದ್ದಾನೆ.

ನಿಷೇಧಿತ ಇ-ಸಿಗರೇಟ್‌ಗಳನ್ನು ಮುಂಬೈಯಿಂದ ಖರೀದಿ ಮಾಡುತ್ತಿದ್ದರು. ಹೀಗೆ ಖರೀದಿಸಿದ ಇ-ಸಿಗರೇಟ್‌ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಕೂಲ್ ಡ್ರಿಂಕ್ಸ್, ಪಫ್ಯೂರ್ಮ್, ಲೈಟರ್‌ಗಳಂತಹ ವಸ್ತುಗಳನ್ನು ಮುಂಬೈಯಿಂದ ಬಸ್ ಹಾಗೂ ರೈಲು ಮಾರ್ಗದ ಮೂಲಕ ಉಡುಪಿ ಜಿಲ್ಲೆಗೆ ತಂದು ಇಲ್ಲಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನು ಕೋವಿಡ್ ಸಮಯದಲ್ಲಿ ಮಣಿಪಾಲದ ವ್ಯಾಪ್ತಿಯ ಕೆಲವೊಂದು ಅಂಗಡಿಗಳಲ್ಲಿ ಇ-ಸಿಗರೇಟ್‌ಗಳನ್ನು ಹೆಚ್ಚಾಗಿ ಮಾರಾಟ ಮಾಡಲಾಗುತ್ತಿತ್ತು. ಈ ವೇಳೆ ಮಣಿಪಾಲ ಪೊಲೀಸರು ನಿರಂತರ ದಾಳಿ ನಡೆಸಿದ ಪರಿಣಾಮ ಇ-ಸಿಗರೇಟ್ ಮಾರಾಟ ಅಂಗಡಿಗಳಲ್ಲಿ ಇರಲಿಲ್ಲ. ಸದ್ಯ ಮತ್ತೆ ಇ-ಸಿಗರೇಟ್ ಮಾರಾಟ ಜಾಲ ಪತ್ತೆಯಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

2 hours ago

ಮಡ್‌ಗಾಂವ್‌ – ಮಂಗಳೂರು ‘ವಂದೇ ಭಾರತ್‌’ ರೈಲು ಬೆಂಗಳೂರಿಗೆ ವಿಸ್ತರಣೆ -vishwanews24

ಮಡ್‌ಗಾಂವ್‌ - ಮಂಗಳೂರು 'ವಂದೇ ಭಾರತ್‌' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್‌-ಮಡ್‌ಗಾಂವ್‌ ನಡುವೆ ಓಡುತ್ತಿದ್ದ…

4 hours ago

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ -vishwanews24

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…

4 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ -vishwanews24

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…

4 hours ago