Featured

ಮಣಿಪಾಲದ ಕೆಎಂಸಿ ಆಸ್ಪತ್ರೆಯ ಆವರಣದಲ್ಲಿ ಉರುಳಿಬಿದ್ದ ಬೃಹತ್ ಮರ -Vishwanews24

ಉಡುಪಿ : ಮಣಿಪಾಲದ ಕೆಎಂಸಿ ಆಸ್ಪತ್ರೆಯ ಆವರಣದಲ್ಲಿ ಬೃಹತ್ ಮರವೊಂದು ಏಕಾಏಕಿ ಉರುಳಿಬಿದ್ದಿದ್ದು, ಘಟನೆಯಲ್ಲಿ ಮರದಡಿ ವಿಶ್ರಾಂತಿ ಪಡೆಯುತ್ತಿದ್ದ ಇಬ್ಬರು ಗಾಯ ಗೊಂಡಿದ್ದಾರೆ. ಮರದಡಿ ನಿಲ್ಲಿಸಿದ್ದ 4 ಕಾರುಗಳು ಜಖಂಗೊಂಡಿವೆ.

ಉಡುಪಿಯಲ್ಲಿ ಮಳೆ ಗಾಳಿ ಇಲ್ಲದಿದ್ದರೂ ಕೆಎಂಸಿ ಆಸ್ಪತ್ರೆಯ ಆವರಣದಲ್ಲಿ ಈ ಬೃಹತ್ ಮರ ಉರುಳಿ ಬಿದ್ದಿದೆ. ಆಸ್ಪತ್ರೆಯ ಕಟ್ಟಡದ ಮೇಲೆ ಮರದ ಕೊಂಬೆಗಳು ಬಿದ್ದಿದ್ದು, ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ.

ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ದೌಡಾಯಿಸಿ ಮರ ಕತ್ತರಿಸಿ ಕಾರುಗಳನ್ನು ತೆರವುಗೊಳಿಸಿದ್ದಾರೆ.

ಕೆಲ ಬಾವಲಿಗಳಿಗೆ ಗಾಯವಾಗಿ ಬಿದ್ದಿದೆ. ಕೆಲ ಬಾವಲಿ ಮರಿಗಳ ರೆಕ್ಕೆಗೆ ಗಾಯವಾಗಿದೆ. ಯಾವಾಗಲು ಮರದ ಕೆಳಗೆ ತುಂಬಾ ಜನ ಕುಳಿತಿರುತ್ತಾರೆ. ಆದ್ರೆ ಇವತ್ತು ಕಡಿಮೆ ಜನ ಇದ್ರು. ಆವರಣದಲ್ಲೇ ಮರ ಬಿದ್ದ ಕಾರಣ ದೊಡ್ಡ ಅವಘಡ ತಪ್ಪಿದೆ, ರಸ್ತೆಗೆ ಬಿದ್ದಿದ್ದರೆ ಅನಾಹುತವಾಗುತ್ತಿತ್ತು ಅಂತ ಸ್ಥಳದಲ್ಲಿದ್ದ ಸರಳೇಬೆಟ್ಟು ಗಣೇಶ್ ರಾಜ್ ಆತಂಕ ವ್ಯಕ್ತಪಡಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago