ಮಣಿಪಾಲ : ವ್ಯಕ್ತಿಯೊಬ್ಬರು ಮನೆಯ ಮೊದಲ ಅಂತಸ್ತಿನ ಮೇಲ್ಬಾವಣೆಯ ಕಬ್ಬಿಣದ ಅಡ್ಡಪಟ್ಟಿಗೆ ನೇಣುಬೀಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ, 80 ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ನಡೆದಿದೆ.
ವ್ಯಕ್ತಿ ನೇಣು ಕುಣಿಕೆಯಲ್ಲಿ ನರಳಾಡುತ್ತಿದ್ದಾಗ, ದೇಹದ ಭಾರವು ನಿಯಂತ್ರಣ ಸಿಗದೆ, ಹಗ್ಗವು ತುಂಡಾದ ಪರಿಣಾಮ, ವ್ಯಕ್ತಿ 20 ಅಡಿಗಿಂತಲೂ ಅಧಿಕ ಎತ್ತರದಿಂದ ಮನೆಯ ಹೊರಾಂಗಳದಲ್ಲಿ ಬಿದ್ದಿದ್ದಾರೆ. ತಲೆ ಭಾಗಕ್ಕಾದ ಗಂಭೀರ ಸ್ವರೂಪದ ಗಾಯದಿಂದ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಮೆಟ್ರಾಯ್ (55ವ) ತಂದೆ ಎಫ್.ಜೆ.ಎ. ಫೆರ್ನಾಂಡಿಸ್ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿದ್ದು ಮಣಿಪಾಲ ಪೋಲಿಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್, ಎ.ಎಸ್.ಐ ನಾಗೇಶ್ ನಾಯ್ಕ, ಸಿಬ್ಬಂದಿ ವಿದ್ಯಾ ಕಾನೂನು ಪ್ರಕ್ರಿಯೆ ನಡೆಸಿದರು. ವಿಧಿ ವಿಜ್ಞಾನ ತಜ್ಞರಾದ ಪ್ರಸನ್ನ, ಲಾವಣ್ಯ, ಹರೀಶ್ ಪರಿಶೀಲಿಸಿದರು. ಶವವನ್ನು ಮಣಿಪಾಲ ಆಸ್ಪತ್ರೆಯ ವೈದಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಇಲಾಖೆಗೆ ನೆರವಾದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…