ಮಣಿಪಾಲ: ಓದುವಂತೆ ಬುದ್ದಿ ಹೇಳಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಬಾಲ್ಕಟ್ಟು ನಿವಾಸಿ ಮಲ್ಲಿಕಾ ಎಂಬವರ ಮಗಳು ಸಮನ್ವಿ ಎಂದು ಗುರುತಿಸಲಾಗಿದೆ.
ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿಧ್ಯಾಬ್ಯಾಸ ಮಾಡುತ್ತಿದ್ದ ಸಮನ್ವಿಗೆ ಡಿ.26ರಂದು ಸಂಜೆ ವೇಳೆ ತಾಯಿ ಮುಂಬರುವ ಪರೀಕ್ಷೆಯ ಬಗ್ಗೆ ಓದಲು ಹೇಳಿದ್ದರು. ಆದರೂ ಸಮನ್ವಿ ಓದದೇ ಫೋನ್‌ನಲ್ಲಿ ಮಾತಾನಾಡುತ್ತಿದ್ದಳು. ಈ ವೇಳೆ ತಾಯಿ ಆಕೆಗೆ ಬುದ್ದಿವಾದದ ಮಾತು ಹೇಳಿದ್ದರು.
ಇದೇ ಚಿಂತೆಯಲ್ಲಿ ಸಮನ್ವಿ ಮನೆಯ ಬೆಡ್ ರೂಂನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಮನೆಯವರು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಸಮನ್ವಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…