Featured

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ – vishwanews24

ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ

ಉಡುಪಿ: ಮಣಿಪಾಲ್‌ ಬಳಿಯ ಕೊಡಂಗೆಯಲ್ಲಿ ಶಾಲಾ ಬಸ್ ಕಂದಕಕ್ಕೆ ಉರುಳಿ ಬಿದ್ದು, ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಣಿಪಾಲದ ಖಾಸಗಿ ಶಾಲೆಗೆ ಸೇರಿದ ಬಸ್ ಮಕ್ಕಳನ್ನು ಕರೆದುಕೊಂಡು ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್‌ನಲ್ಲಿದ್ದ ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ವಿದ್ಯಾರ್ಥಿಗೆ ತಲೆಗೆ ತೀವ್ರ ಪೆಟ್ಟಾಗಿದೆ.

ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ನಿಂತಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿದ್ದಾರೆ. ಘಟನೆ ಕುರಿತು ಮಣಿಪಾಲ್ ಪೊಲೀಸರು ‌ಪರಿಶೀಲನೆ ನಡೆಸಿದ್ದಾರೆ

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

1 hour ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

1 hour ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

2 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

2 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

2 hours ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

2 hours ago