Featured

ಮಣಿಪಾಲ: ಕಟ್ಟಡ ಕಾಮಗಾರಿ ವೇಳೆ ನಾಲ್ಕನೆ ಮಹಡಿಯಿಂದ ಬಿದ್ದು ಕಾರ್ಮಿಕ  ಮೃತ್ಯು – vishwanews24

ಮಣಿಪಾಲ: ಕಟ್ಟಡ ಕಾಮಗಾರಿ ವೇಳೆ ನಾಲ್ಕನೆ ಮಹಡಿಯಿಂದ ಬಿದ್ದು ಕಾರ್ಮಿಕ  ಮೃತ್ಯು

ಮಣಿಪಾಲ: ಕಟ್ಟಡ ಕಾಮಗಾರಿ ವೇಳೆ ನಾಲ್ಕನೆ ಮಹಡಿಯಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಮೇ 23ರಂದು ಸಂಜೆ ವೇಳೆ ಮಣಿಪಾಲ ಈಶ್ವರನಗರ ಎಂಬಲ್ಲಿ ನಡೆದಿದೆ.

ಮೃತರನ್ನು ಕುಕ್ಕೆಹಳ್ಳಿ ಗ್ರಾಮದ ರಘುರಾಮ ಕುಲಾಲ್(50) ಎಂದು ಗುರುತಿಸಲಾಗಿದೆ. ಮಣಿಪಾಲದ ಈಶ್ವರದ ನಗರದ ಕಟ್ಟಡ ಕಾಮಗಾರಿ ಕೆಲಸ ನಡೆಯುತ್ತಿದ್ದು, ಒಂದು ತಿಂಗಳಿನಿಂದ ಹತ್ತು ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮೃತ ರಘು ರಾಮ್ ಸಹೋದರ ಪದ್ಮನಾಭ ಅವರೂ ಈ ತಂಡದಲ್ಲಿದ್ದರು ರಘು ರಾಮ್ ಅವರು ಮಹಡಿಯ ಹೊರಭಾಗದ ಗಾರೆ ಕೆಲಸ ಮಾಡುತ್ತಿದ್ದರು.

ಕೆಲಸ ಮಾಡುತ್ತಿದ್ದ ವೇಳೆ ಬಕೆಟ್ ತರಲು ಕಟ್ಟಡದ ಹೊರಮೈಯ ಪ್ಯಾರಾಪೀಟ್ ಮೇಲೆ ಕಾಲು ಇಟ್ಟಿದ್ದರು. ಈ ವೇಳೆ ಅವರು ಕಾಲು ಜಾರಿ ಕೆಳಕ್ಕೆ ೫೦ ಅಡಿ ಆಳಕ್ಕೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಕಟ್ಟಡದ ಮಾಲಕ ಗಣೇಶ ಮತ್ತು ಕಟ್ಟಡದ ಗುತ್ತಿಗೆದಾರ ಅಮರೇಶ ಕಟ್ಟಡದ ಗಾರೆ ಕೆಲಸ ಮಾಡುವ ವೇಳೆ ಮುಂಜಾಗೃತ ದೃಷ್ಠಿಯಿಂದ ಯಾವುದೇ ಸುರಕ್ಷತಾ ಸಾಧನಗಳನ್ನು ಅಳವಡಿಸದೇ ಇದ್ದುದರಿಂದ ಈ ಘಟನೆ ನಡೆದಿದೆ ಎಂದು ದೂರಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

14 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

15 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

15 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

16 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

16 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago