Featured

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯ ರಕ್ತ ಕೇಂದ್ರಕ್ಕೆ ಐಎಸ್‌ಬಿಟಿ ಅಂತಾರಾಷ್ಟ್ರೀಯ ಪ್ರಶಸ್ತಿ – Vishwanews24

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯ ರಕ್ತ ಕೇಂದ್ರಕ್ಕೆ ಐಎಸ್‌ಬಿಟಿ ಅಂತಾರಾಷ್ಟ್ರೀಯ ಪ್ರಶಸ್ತಿ

ಮಣಿಪಾಲ,: ಇಂಟರ್ನ್ಯಾಷನಲ್ ಸೊಸೈಟಿ ಆಫ್ ಬ್ಲಡ್ ಟ್ರಾನ್ಸ್ಫ್ಯೂಷನ್ (ಐ ಎಸ್ ಬಿ ಟಿ ) ನ 37ನೇ ಇಂಟರ್ನ್ಯಾಷನಲ್ ಕಾಂಗ್ರೆಸ್ ನ ಉದ್ಘಾಟನಾ ಸಮಾರಂಭದಲ್ಲಿ ಕಸ್ತೂರ್ಬಾ ಆಸ್ಪತ್ರೆಯ ರಕ್ತ ಕೇಂದ್ರಕ್ಕೆ ಅಭಿವೃದ್ಧಿ ಶೀಲ ರಾಷ್ಟಗಳಿಗೆ ಕೊಡಲ್ಪಡುವ ಇಂಟರ್ನ್ಯಾಷನಲ್ ಸೊಸೈಟಿ ಆಫ್ ಬ್ಲಡ್ ಟ್ರಾನ್ಸ್ಫ್ಯೂಷನ್ ಅಂತಾರಾಷ್ಟ್ರೀಯ (ISBT) ಪ್ರಶಸ್ತಿಯನ್ನು ನೀಡಿದೆ.

ಈ ಅಂತಾರಾಷ್ಟ್ರೀಯ ಪ್ರಶಸ್ತಿಯು ನಮ್ಮ ಸಂಸ್ಥೆಗೆ ಮತ್ತೊಂದು ಗರಿಯಾಗಿದೆ ಎಂದು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ ಶರತ್ ಕುಮಾರ್ ರಾವ್ ಹೇಳಿದ್ದಾರೆ. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿ ಶ್ರೀ ಸಿ ಜಿ ಮುತ್ತಣ್ಣ ಅವರು, ಅಗತ್ಯವಿರುವವರಿಗೆ ಗುಣಮಟ್ಟದ ರಕ್ತದ ಉತ್ಪನ್ನಗಳನ್ನು ಒದಗಿಸಲು ಹಗಲಿರುಳು ಶ್ರಮಿಸುತ್ತಿರುವ ರಕ್ತ ಕೇಂದ್ರದ ಸಿಬ್ಬಂದಿಗಳ ಪ್ರಾಮಾಣಿಕ ಮತ್ತು ಸಮರ್ಪಿತ ಸೇವೆಯನ್ನು ಶ್ಲಾಘಿಸಿದರು.

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು ಈ ಪ್ರಶಸ್ತಿ ಪಡೆಯುವಲ್ಲಿ ಶ್ರಮಿಸಿದ ಇಡೀ ತಂಡವನ್ನು ಅಭಿನಂದಿಸಿ, ” ಕಸ್ತೂರ್ಬಾ ಆಸ್ಪತ್ರೆಯ ರಕ್ತ ಕೇಂದ್ರವು ದೇಶದಲ್ಲಿ ರಕ್ತ ವರ್ಗಾವಣೆ ಪದ್ಧತಿಯನ್ನು ಬಲಪಡಿಸುವಲ್ಲಿ ನೀಡಿದ ಮಹತ್ವದ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ” ಎಂದರು.

ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿದ ರಕ್ತ ಕೇಂದ್ರದ ನಿರ್ದೇಶಕಿ ಡಾ.ಶಮೀ ಶಾಸ್ತ್ರಿ ಅವರು, ” ನಮ್ಮ ಕೇಂದ್ರದ ರಕ್ತ ಸಂಗ್ರಹಣೆ, ಸಂಸ್ಕರಣೆ, ಪರೀಕ್ಷಾ ವಿಧಾನಗಳು ಮತ್ತು ಕೇಂದ್ರದಲ್ಲಿ ಪಾಲಿಸುವ ಗುಣಮಟ್ಟದ ವ್ಯವಸ್ಥೆಯನ್ನು ಮೌಲ್ಯಮಾಪನಕ್ಕೆ ಪರಿಗಣಿಸಲಾಗಿದೆ. ಅಲ್ಲದೇ ವಿಭಾಗದ ಶೈಕ್ಷಣಿಕ, ತರಬೇತಿ ಚಟುವಟಿಕೆಗಳು, ಪ್ರಕಟಣೆಗಳು, ಪ್ರಸ್ತುತಿಗಳು, ಪ್ರಾದೇಶಿಕ ಮತ್ತು ಜಾಗತಿಕ ಸಹಯೋಗಗಳು ಮತ್ತು ಸಂಶೋಧನಾ ಚಟುವಟಿಕೆಗಳನ್ನು ಸಹ ಗಣನೆಗೆ ತೆಗೆದುಕೊಂಡು ಈ ಪ್ರಶಸ್ತಿ ನೀಡಲಾಗಿದೆ ಎಂದು ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago