ಮಣಿಪಾಲ: ಕಾರಿನ ಮೇಲೆ ಪಟಾಕಿಯನ್ನು ಇಟ್ಟು ಸಿಡಿಸಿದ ವ್ಯಕ್ತಿಯ ವಿರುದ್ದ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಣಿಪಾಲ ವಿಪಿ ನಗರದ ಸೆಲೂನ್ ನಲ್ಲಿ ಕೆಲಸ ಮಾಡಿಕೊಂಡಿರುವ ವಿಶಾಲ್ ಕೊಹ್ಲಿ (26) ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 25ರಂದು ರಾತ್ರಿ 9.30 ರ ಹೊತ್ತಿಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಡಾ. ವಿ ಎಸ್ ಆಚಾರ್ಯ ರಸ್ತೆಯಲ್ಲಿ ಕಾರು ನಂಬ್ರ ಕೆ.ಎ20 9232 ರಲ್ಲಿ ವಿಶಾಲ್ ಕಾರನ್ನು ನಿರ್ಲಕ್ಷ್ಯತನ, ಅಜಾಗರುಕತೆ ಹಾಗೂ ಅಪಾಯಕಾರಿ ರೀತಿಯಲ್ಲಿ ಚಲಾಯಿಸಿ ಕಾರಿನ ಮೇಲ್ಗಡೆ ಪಟಾಕಿ ಇಟ್ಟು ಸಿಡಿಸಿ ಮನುಷ್ಯನ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಕೃತ್ಯ ಎಸಗಿದ್ದು, ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗಿದ್ದವು.
ನೇರ ನುಡಿಗಳಿಂದ ಶತ್ರುಗಳ ಹೆಚ್ಚಳ.. ನೋಡಿ ಇಂದಿನ ದಿನ ಭವಿಷ್ಯ – Vishwanews24
ಈ ಕೃತ್ಯದಲ್ಲಿ ಭಾಗಿಯಾದ ಆರೋಪಿ ಮತ್ತು ವಾಹನ ಪತ್ತೆಗೆ ಅಕ್ಷಯ್ ಎಂ ಹಾಕೆ ಎಸ್ಪಿ ಉಡುಪಿ ಅವರ ಮಾರ್ಗದರ್ಶನದಲ್ಲಿ ಮಣಿಪಾಲ ಪೊಲೀಸ್ ಠಾಣಾ ಪಿ ಎಸ್ ಐ ರಾಜಶೇಖರ ವಂದಲಿ, ಶೈಲೇಶ್ ಎ ಎಸ್ ಐ ಮತ್ತು ಹೆಡ್ ಕಾನ್ಸ್ಟೇಬಲ್ ಪ್ರಸನ್ನ ಅವರು ಅಕ್ಟೋಬರ್ 27ರಂದು ಆರೋಪಿಯನ್ನು ಕಾರು ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…