Featured

ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ; ತಪ್ಪಿದ ಭಾರಿ ಅನಾಹುತ – vishwanews24

ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ; ತಪ್ಪಿದ ಭಾರಿ ಅನಾಹುತ

ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾಗಿ ಬಸ್ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಸೋಮವಾರ ಮಣಿಪಾಲದಲ್ಲಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.

ಮಣಿಪಾಲದ ಮಾಧವ ಕೃಪಾ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕ ಸುರೇಶ್ ಸಣ್ಣಕ್ಕಿಬೆಟ್ಟು (54) ಇವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಪರಿಸ್ಥಿತಿಯನ್ನು ಅರಿತ ಚಾಲಕ ಬಸ್ಸಿನ ನಿಯಂತ್ರಣ ಕಳೆದುಕೊಳ್ಳುವ ಮುನ್ನವೇ ವಾಹನವನ್ನು ರಸ್ತೆ ಬದಿಗೆ ತರುವ ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಚಾಲಕನ ಸಮಯೋಚಿತ ಕ್ರಮದಿಂದ ದೊಡ್ಡ ದುರಂತವೊಂದು ತಪ್ಪಿದೆ. ತಕ್ಷಣ ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ಚಾಲಕನ ನೆರವಿಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago