ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾಗಿ ಬಸ್ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಸೋಮವಾರ ಮಣಿಪಾಲದಲ್ಲಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.
ಮಣಿಪಾಲದ ಮಾಧವ ಕೃಪಾ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕ ಸುರೇಶ್ ಸಣ್ಣಕ್ಕಿಬೆಟ್ಟು (54) ಇವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಪರಿಸ್ಥಿತಿಯನ್ನು ಅರಿತ ಚಾಲಕ ಬಸ್ಸಿನ ನಿಯಂತ್ರಣ ಕಳೆದುಕೊಳ್ಳುವ ಮುನ್ನವೇ ವಾಹನವನ್ನು ರಸ್ತೆ ಬದಿಗೆ ತರುವ ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಚಾಲಕನ ಸಮಯೋಚಿತ ಕ್ರಮದಿಂದ ದೊಡ್ಡ ದುರಂತವೊಂದು ತಪ್ಪಿದೆ. ತಕ್ಷಣ ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ಚಾಲಕನ ನೆರವಿಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…