Featured

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ ಕಾರು ಜಖಂ  ; ಪ್ರಯಾಣಿಕರು ಅಪಾಯದಿಂದ ಪಾರು – Vishwanews24

ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ ಕಾರು ಜಖಂ  ; ಪ್ರಯಾಣಿಕರು ಅಪಾಯದಿಂದ ಪಾರು

ಮಣಿಪಾಲ : ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಪೆರಂಪಳ್ಳಿ ಸುಂದರಿ ಗೇಟ್‌ ಸಮೀಪ ಸೋಮವಾರ ತಡರಾತ್ರಿ ನಡೆದಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮರವಂತೆ ಕಡೆಯಿಂದ ಮಣಿಪಾಲ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ 2-3 ಪಲ್ಟಿಯಾಗಿ ಮತ್ತೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಅಲ್ಲಿ ಬಾಕಿಯಾಯಿತು ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಭಾಗದಲ್ಲಿ ರಾತ್ರಿಯಿಡೀ ವಿದ್ಯುತ್ ಇರಲಿಲ್ಲ. ಕಾರಿನಲ್ಲಿ ಸುಮಾರು ಎರಡ್ಮೂರು ಮಂದಿ ಇದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕಾರು ಸಂಪೂರ್ಣ ಜಖಂಗೊಂಡಿದೆ.

ಮಂಗಳೂರು: ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ : ಸಿಐಡಿ ತನಿಖೆಗೆ ಸರ್ಕಾರ ಆದೇಶ – Vishwanews24

ಅಪಘಾತ ಸಂಭವಿಸಿದ ಪ್ರದೇಶ ತಿರುವಿನಿಂದ ಕೂಡಿದ್ದು, ವಾಹನ ಸವಾರರಿಗೆ ಅಪಾಯ ಸರ್ವೇ ಸಾಮಾನ್ಯ ಎಂಬಂತಾಗಿದೆ. ವಾರಕ್ಕೆ ಕನಿಷ್ಠ ಒಂದೆರಡು ಅಪಘಾತ ಇಲ್ಲಿ ಸಂಭವಿಸುತ್ತಿದೆ. ತಿರುವು ಸರಿಪಡಿಸಲು ಆಗ್ರಹಿಸಿದ್ದರೂ ಈವರೆಗೆ ಯಾರೂ ಸರಿಪಡಿಸುವ ಕೆಲಸಕ್ಕೆ ಕೈ ಹಾಕಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

2 days ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago