ಮಣಿಪಾಲ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ಎಂಐಟಿ ವಿದ್ಯಾರ್ಥಿಯೋರ್ವ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಣಿಪಾಲದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಎಂಐಟಿ ವಿದ್ಯಾರ್ಥಿ ನಿಖಿಲ್ (23) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಮಣಿಪಾಲದಲ್ಲಿ ವ್ಯಾಸಂಗ ಮಾಡಿಕೊಂಡಿದ್ದರು.
ಮಹೇಂದ್ರ ಜಿ.ಅವರು ಶುಕ್ರವಾರ ತನ್ನ ಸ್ನೇಹಿತರಾದ ನಿಹಾಲ್ ಮತ್ತು ನಿಖಿಲ್ ಅವರೊಂದಿಗೆ ಬೈಕ್‌ನಲ್ಲಿ ಕೆಳ ಪರ್ಕಳ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದು, ಬೈಕನ್ನು ನಿಹಾಲ್ ಚಲಾಯಿಸುತ್ತಿದ್ದರು ಎನ್ನಲಾಗಿದೆ.
ಮಹೇಂದ್ರ ಅವರ ಸ್ನೇಹಿತ ನಿಖಿಲ್ ಮಧ್ಯದಲ್ಲಿ ಮತ್ತು ಮಹೇಂದ್ರ ಅವರು ನಿಖಿಲ್ ನ ಹಿಂಬದಿಯಲ್ಲಿ ಕುಳಿತುಕೊಂಡಿದ್ದರು. ಬೈಕ್ ಮಣಿಪಾಲದ ಟೈಗರ್ ಸರ್ಕಲ್‌ನ ಸ್ವಲ್ಪ ಮುಂದೆ ತಲುಪಿದಾಗ ಆರೋಪಿ ನಿಹಾಲ್ ಬೈಕ್ ಅನ್ನು ಅತೀ ವೇಗದಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ.
ಈ ವೇಳೆ ಮೂರೂ ಮಂದಿ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ನಿಖಿಲ್ ನ ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಉಳಿದ ಇಬ್ಬರಿಗೂ ಗಾಯ ಉಂಟಾಗಿತ್ತು. ಸ್ಥಳೀಯರು ಗಾಯಾಳುಗಳನ್ನು ಆಯಂಬುಲೆನ್ಸ್‌ನಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…