ಮಣಿಪಾಲ: ಯೌವನದಲ್ಲಿ ಹುಚ್ಚು ಮನಸ್ಸು ಏನೇನೋ ಸಾಹಸಕ್ಕೆ ಪ್ರೇರಣೆ ನೀಡುತ್ತಿದೆ. ಆದರೆ ಸ್ವಲ್ಪ ಎಡವಿದರೂ ಜೀವಕ್ಕೆ ಆಪತ್ತು ನಿಶ್ಚಿತ. ಇಂತಹುದೇ ಅತಿರೇಕದ ಸಾಹಸಕ್ಕೆ ಮುಂದಾಗಿ ಬೈಕ್ ಸ್ಟಂಟ್ ಮಾಡ ಹೊರಟ ಯುವಕನೋರ್ವ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ದ್ವಿಚಕ್ರ ವಾಹನದಲ್ಲಿ ಯುವಕನೋರ್ವ ಹುಚ್ಚಾಟ ನಡೆಸಿದ್ದು ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ರೀಲ್ಸ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡಿದ್ದಾನೆ.
ಯುವಕನ ಹುಚ್ಚಾಟದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಪರೀತವಾದ ಆಕ್ರೋಶ ವ್ಯಕ್ತವಾಗಿದ್ದು ಸ್ಕೂಟಿಯಲ್ಲಿ ಉಡುಪಿ ರಿಜಿಸ್ಟ್ರೇಶನ್ ನಂಬರ್ ಪ್ಲೇಟ್ ಇರುವುದು ಕಂಡು ಬಂದಿದ್ದು ಯುವಕನ ಸ್ಕೂಟಿಯ ಸ್ಟಂಟ್ ನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಣಿಪಾಲ ಪೊಲೀಸರ ಮೂಲಕ ಯುವಕನ ಗುರುತನ್ನು ಪತ್ತೆ ಹಚ್ಚಿದ್ದಾರೆ.
ಯುವಕನನ್ನು ಪರ್ಕಳ ನಿವಾಸಿ ಅಬೂಬಕ್ಕರ್ ಪುತ್ರ ಆಶಿಕ್ ಎಂದು ಗುರುತಿಸಲಾಗಿದೆ.
ಯುವಕನ ವಿರುದ್ದ ದ್ವಿಚಕ್ರ ವಾಹನ ಸ್ಟಂಟ್ ಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…